Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:2 - ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇವಿುನಲ್ಲಿ ಕುರೀ ಅಗಸೇಬಾಗಲಿನ ಹತ್ತಿರದಲ್ಲಿ ಒಂದು ಕೊಳವಿದೆ; ಇದಕ್ಕೆ ಇಬ್ರಿಯ ಮಾತಿನಲ್ಲಿ ಬೇತ್ಸಥಾ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜೆರುಸಲೇಮಿನಲ್ಲಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಯೆಹೂದ್ಯರ ಭಾಷೆಯಲ್ಲಿ ಅದಕ್ಕೆ “ಬೆತ್ಸಥ” ಎಂದು ಕರೆಯುತ್ತಾರೆ. ಈ ಕೊಳವು “ಕುರಿಬಾಗಿಲು” ಎಂಬ ಸ್ಥಳದ ಸಮೀಪದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆರೂಸಲೇಮಿನಲ್ಲಿ “ಕುರಿಬಾಗಿಲು” ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆರುಜಲೆಮಾತ್ ಬಕ್ರಿ ಇಕ್ತಲೊ ಎಕ್ ಜಾಗೊ ಹೊತ್ತೊ ತ್ಯಾ ವಾಟೆರ್ ಎಕ್ ಪಾಂಚ್ ಮಂಟಪಾಂಚೆ ತಳೆ ಹೊತ್ತೆ. ಜುದೆವ್ ಲೊಕಾ ಹ್ಯಾ ತಳ್ಯಾಕ್ ಬೆಥ್‍ಝತಾ ಮನುನ್ ಬಲ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:2
14 ತಿಳಿವುಗಳ ಹೋಲಿಕೆ  

ಅಲ್ಲಿಂದ ಎಫ್ರಯಿಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.


ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.


ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ನಡುವೆಯಿದ್ದ ಗೋಡೆಯನ್ನು ಸರಿಮಾಡಿದವರು ಅಕ್ಕಸಾಲಿಗರು ಹಾಗು ವರ್ತಕರು.


ಎರಡು ಗೋಡೆಗಳ ನಡುವೆ ಹಳೆಯ ಕೊಳದಿಂದ ಹರಿಯುವ ನೀರಿಗಾಗಿ ಜಲಾಶಯವನ್ನು ಕಟ್ಟಿದಿರಿ. ಆದರೆ ಪುರಾತನ ಕಾಲದಿಂದ ನಿಯೋಜಿಸಿ ಇದನ್ನೆಲ್ಲಾ ನಡೆಸಿದಾತನ ಕಡೆಗೆ ಗಮನ ಕೊಡದೆಹೋದಿರಿ.


ಸೈನ್ಯಾಧಿಪತಿ ಅಪ್ಪಣೆ ಕೊಡಲು, ಪೌಲನು ಮೆಟ್ಟಲಿನ ಮೇಲೆ ನಿಂತು ಜನರನ್ನು ನೋಡಿ ಮೌನವಾಗಿರುವಂತೆ ಕೈಸನ್ನೆ ಮಾಡಿದನು. ಆಗ ನಿಶ್ಯಬ್ದ ಉಂಟಾಯಿತು. ಅನಂತರ ಅವರನ್ನು ಸಂಬೋಧಿಸಿ ಹಿಬ್ರುಭಾಷೆಯಲ್ಲಿ ಮಾತಾಡುತ್ತಾ ಹೀಗೆಂದನು:


ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ).


ಯೇಸು ಸ್ವಾಮಿ ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು ‘ಕಪಾಲ’ ಎಂಬ ಸ್ಥಳಕ್ಕೆ ಹೋದರು. ಇದಕ್ಕೆ ಯೆಹೂದ್ಯರ ಭಾಷೆಯಲ್ಲಿ ‘ಗೊಲ್ಗೊಥಾ’ ಎಂದು ಹೆಸರು.


ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.


ದಾವೀದನ ಕೋಟೆಯ ಬಿರುಕುಗಳು ಬಹಳವೆಂಬುದನ್ನು ಗಮನಿಸಿದಿರಿ. ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.


ಯೇಸುವನ್ನು ಶಿಲುಬೆಗೇರಿಸಿದ ಸ್ಥಳ ನಗರಕ್ಕೆ ಸಮೀಪದಲ್ಲೇ ಇದ್ದುದರಿಂದ, ಹಲವು ಮಂದಿ ಯೆಹೂದ್ಯರು ಆ ಫಲಕವನ್ನು ಓದಿದರು. ಅದನ್ನು ಹಿಬ್ರಿಯ, ಲತೀನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.


ಕುರುಡರು, ಕುಂಟರು, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಆ ಮಂಟಪಗಳಲ್ಲಿ ಬಿದ್ದುಕೊಳ್ಳುತ್ತಾ ಇದ್ದರು.


ಯೇಸು ಅವರಿಗೆ, “ಸಬ್ಬತ್ ದಿನ ನಾನು ಮಾಡಿದ್ದು ಒಂದು ಸೂಚಕಕಾರ್ಯ ಮಾತ್ರ. ಅಷ್ಟಕ್ಕೇ ನೀವೆಲ್ಲರೂ ಕಂಗಾಲಾಗಿದ್ದೀರಿ.


ಪಾತಾಳಕೂಪದ ದೂತನೇ ಅವುಗಳನ್ನು ಆಳುವ ಅರಸು. ಅವನಿಗೆ ಹಿಬ್ರಿಯ ಭಾಷೆಯಲ್ಲಿ, ‘ಅಬದ್ದೋನ್’ ಎಂದೂ ಗ್ರೀಕ್ ಭಾಷೆಯಲ್ಲಿ, ‘ಅಪೊಲ್ಲುವೋನ್’ ಎಂದೂ ಹೆಸರು.


ಆ ದೆವ್ವಗಳು ಭೂರಾಜರೆಲ್ಲರನ್ನೂ ಒಂದು ಸ್ಥಳದಲ್ಲಿ ಸೇರಿಸಿದವು. ಆ ಸ್ಥಳಕ್ಕೆ ಹಿಬ್ರಿಯ ಭಾಷೆಯಲ್ಲಿ, ‘ಹರ್ಮಗೆದೋನ್’ ಎಂದು ಹೆಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು