ಯೋಹಾನ 5:21 - ಕನ್ನಡ ಸತ್ಯವೇದವು C.L. Bible (BSI)21 ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆಂದು ತಿಳುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವ ಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಕಶೆ ಬಾಬಾ ಮರಲ್ಲ್ಯಾಕ್ನಿ ಝಿತ್ತೊ ಕರುನ್ ಉಟ್ವುತಾ, ತಸೆಚ್ ಅಪ್ನಾಕ್ ಪಾಜೆ ಹೊಲ್ಲ್ಯಾಕ್ನಿ ಲೆಕ್‍ಬಿ ಝಿತ್ತೆ ಕರುನ್ ಉಟ್ವುತಾ. ಅಧ್ಯಾಯವನ್ನು ನೋಡಿ |
ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.