Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:22 - ಕನ್ನಡ ಸತ್ಯವೇದವು C.L. Bible (BSI)

22 ಅಲ್ಲದೆ, ಪಿತನು ಯಾರನ್ನೂ ತೀರ್ಪಿಗೆ ಗುರಿಮಾಡುವುದಿಲ್ಲ. ತೀರ್ಪುಕೊಡುವ ಅಧಿಕಾರವನ್ನೆಲ್ಲಾ ಅವರು ಪುತ್ರನಿಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವದೂ ಇಲ್ಲ; ತೀರ್ಪುಮಾಡುವ ಅಧಿಕಾರವನ್ನೆಲ್ಲಾ ಮಗನಿಗೆ ಕೊಟ್ಟಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತಂದೆಯು ತೀರ್ಪು ಮಾಡುವ ಅಧಿಕಾರವನ್ನೆಲ್ಲಾ ಮಗನಿಗೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತಂದೆ ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತೀರ್ಪು ಮಾಡುವುದನ್ನೆಲ್ಲಾ ಪುತ್ರನಿಗೆ ಒಪ್ಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅನಿಬಿ ಬಾಬಾ ಅಪ್ನಿಚ್ ಕೊನಾಚಿ ಇಚಾರ್‍ನಿ ಕರಿನಾ, ತೆನಿ ಇಚಾರ್‍ನಿ ಕರ್‍ತಲೊ ಸಗ್ಳೊ ಅದಿಕಾರ್ ಲೆಕಾಕ್ ದಿಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:22
23 ತಿಳಿವುಗಳ ಹೋಲಿಕೆ  

ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ.


ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


ಜೀವಂತರಿಗೂ ಮೃತರಿಗೂ ನ್ಯಾಯತೀರಿಸಲು ಸಿದ್ಧವಾಗಿರುವ ದೇವರಿಗೆ ಅವರು ಲೆಕ್ಕಕೊಡಬೇಕಾಗುವುದು.


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು