Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:26 - ಕನ್ನಡ ಸತ್ಯವೇದವು C.L. Bible (BSI)

26 ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ತಂದೆಯು ತಾನು ಹೇಗೆ ಸ್ವತಃಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃಜೀವವುಳ್ಳವನಾಗಿರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕಶೆ ಬಾಬಾ ಜಿವಾಚೊ ಮುಳ್ ತಸೆಚ್ ತೆನಿ ಅಪ್ನಾಚ್ಯಾ ಲೆಕಾಕ್‍ಬಿ ಜಿವಾಚೊ ಮುಳ್ ಕರುನ್ ಥವ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:26
26 ತಿಳಿವುಗಳ ಹೋಲಿಕೆ  

ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀವು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು,


ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.


ಆಗ ದೇವರು ಹೀಗೆಂದರು: “ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ 'ತಾನಾಗಿ ಇರುವವನು,' ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾನೆ ಎಂದು ಹೇಳು.”


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಜೀವಸ್ವರೂಪಿ ಆದ ಪಿತನು ನನ್ನನ್ನು ಕಳುಹಿಸಿಕೊಟ್ಟಿರುವರು. ನಾನು ಅವರಿಂದಲೇ ಜೀವಿಸುತ್ತೇನೆ. ಅಂತೆಯೇ ನನ್ನನ್ನು ಭುಜಿಸುವವನು ನನ್ನಿಂದಲೇ ಜೀವಿಸುತ್ತಾನೆ.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.


ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು