Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:34 - ಕನ್ನಡ ಸತ್ಯವೇದವು C.L. Bible (BSI)

34 ನನಗೆ ಮಾನವ ಸಾಕ್ಷಿ ಬೇಕೆಂದು ಅಲ್ಲ; ಆದರೆ ಇದನ್ನೆಲ್ಲಾ ನಿಮ್ಮ ಉದ್ಧಾರಕ್ಕೆಂದು ನಾನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ತಕ್ಕೊಳ್ಳುವದಿಲ್ಲ; ಆದರೂ ನಿಮಗೆ ರಕ್ಷಣೆ ಆಗಬೇಕೆಂದು ಇದನ್ನು ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆದರೆ ನನ್ನ ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ನನಗೆ ಮನುಷ್ಯನೊಬ್ಬನ ಅಗತ್ಯವಿಲ್ಲ. ಆದರೆ ನಿಮಗೆ ರಕ್ಷಣೆಯಾಗಬೇಕೆಂದು ನಾನು ಈ ಸಂಗತಿಗಳನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಾನಾದರೋ ಮಾನವರ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ. ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವುಗಳನ್ನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಮಾಜೆ ವಿಶಯಾತ್ ಎಕ್ ಮಾನ್ಸಾಚಿ ಸಾಕ್ಷಿ ಪಾಜೆಚ್ ಮನುನ್ ನಾ, ಖರೆ ತುಮಿ ನಾಸಾತ್ನಾ ಹುರುಕ್ ಪಾಜೆ ಮಟಲ್ಲ್ಯಾಸಾಟಿ ಮಿಯಾ ಹೆ ಸಾಂಗುಲಾಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:34
16 ತಿಳಿವುಗಳ ಹೋಲಿಕೆ  

ಮನುಷ್ಯರು ಕೊಡುವ ಸಾಕ್ಷ್ಯವನ್ನು ನಾವು ಅಂಗೀಕರಿಸುತ್ತೇವೆ. ದೇವರು ನೀಡುವ ಸಾಕ್ಷ್ಯ ಅದಕ್ಕಿಂತಲೂ ಶ್ರೇಷ್ಠವಾದುದು. ದೇವರ ಈ ಸಾಕ್ಷ್ಯ ಅವರ ಪುತ್ರನನ್ನು ಕುರಿತದ್ದಾಗಿದೆ.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.


ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ.


ಸಹೋದರರೇ, ನನ್ನ ಸ್ವಜನರಾದ ಇಸ್ರಯೇಲರು ಜೀವೋದ್ಧಾರ ಹೊಂದಬೇಕೆಂದೇ ನನ್ನ ಹಾರ್ದಿಕ ಹಂಬಲ. ನಾನು ದೇವರಲ್ಲಿ ಮಾಡುವ ಪ್ರಾರ್ಥನೆಯೂ ಇದೇ.


ಅವರಲ್ಲಿ ಕೆಲವರು ಅಪ್ರಾಮಾಣಿಕರಾಗಿ ನಡೆದುಕೊಂಡಿದ್ದರೆ ಏನಾಯಿತು? ದೇವರ ಪ್ರಾಮಾಣಿಕತನಕ್ಕೆ ಭಂಗಬರಲು ಸಾಧ್ಯವೆ?


ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ.


“ನಾನು ಮನುಷ್ಯರಿಂದ ಬರುವ ಗೌರವವನ್ನು ಅರಸುವುದಿಲ್ಲ.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಕೇಡಿಗೆ ಸೋಲದೆ, ಒಳಿತಿನಿಂದ ಕೇಡನ್ನು ಸೋಲಿಸು.


ಆದರೆ ಇಸ್ರಯೇಲರನ್ನು ಕುರಿತು: “ಅವಿಧೇಯರೂ ಪ್ರತಿಭಟಿಸುವವರೂ ಆದ ಈ ಜನಾಂಗವನ್ನು ದಿನವೆಲ್ಲಾ ನಾನು ಕೈಚಾಚಿ ಕರೆದೆ,” ಎಂದು ಪ್ರವಾದಿಸಿದ್ದಾನೆ.


ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.


ನನ್ನ ಪರವಾಗಿ ಸಾಕ್ಷಿ ನೀಡುವಾತನು ಇನ್ನೊಬ್ಬನಿದ್ದಾನೆ. ಆತನು ನೀಡುವ ಸಾಕ್ಷ್ಯಕ್ಕೆ ಬೆಲೆಯಿದೆ ಎಂದು ನಾನು ಬಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು