Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:35 - ಕನ್ನಡ ಸತ್ಯವೇದವು C.L. Bible (BSI)

35 ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೋಹಾನನು ಉರಿಯುವ ದೀಪದೋಪಾದಿಯಲ್ಲಿ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪಕಾಲ ವಿನೋದಗೊಳ್ಳುವದಕ್ಕೆ ಮನಸ್ಸುಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೋಹಾನನು ಉರಿದು ಪ್ರಕಾಶಿಸುವ ದೀಪವಾಗಿದ್ದನು. ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಅತ್ಯಾನಂದಪಡಲು ನೀವು ಇಚ್ಚಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜುವಾಂವ್ ಎಕ್ ಪೆಟ್ತಾ ಅನಿ ಹೊಳ್ವಳ್ತಲ್ಯಾ ದಿವ್ಯಾ ಸಾರ್ಕೊ ಹೊತ್ತೊ, ಅನಿ ತುಮಿ ಎಕ್ ಉಲ್ಲೊಸೊ ಎಳ್ ತ್ಯಾ ಉಜ್ವೊಡಾತ್ ರ್‍ಹಾವ್ನ್ ಖುಶಿ ಹೊಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:35
18 ತಿಳಿವುಗಳ ಹೋಲಿಕೆ  

ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ.


ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ.


ಮಾನವನಾಗಿ ಜನಿಸಿದ ಯಾವನೂ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಆದರೂ ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ,” ಎಂದರು.


ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.


ಅದಕ್ಕೆ ಅವರು ತಮ್ಮತಮ್ಮೊಳಗೇ ಹೀಗೆಂದು ತರ್ಕಮಾಡಲಾರಂಭಿಸಿದರು: “ದೇವರಿಂದ ಬಂತು ಎಂದು ಉತ್ತರಿಸಿದರೆ, ‘ಹಾಗಾದರೆ ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು. ‘ಮನುಷ್ಯರಿಂದ ಬಂತು’ ಎಂದು ಹೇಳಿದೆವಾದರೆ ಜನಸಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ,” ಎಂದುಕೊಂಡರು.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.


ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


ಜುದೇಯ ಪ್ರಾಂತ್ಯದ ಎಲ್ಲೆಡೆಗಳಿಂದಲೂ ಜೆರುಸಲೇಮಿನಿಂದಲೂ ಜನರು ಆತನ ಬಳಿಗೆ ಹೋಗುತ್ತಿದ್ದರು. ಅವರು ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಆತನಿಂದ ಸ್ನಾನದೀಕ್ಷೆ ಪಡೆದುಕೊಳ್ಳುತ್ತಿದ್ದರು.


ಮೋಶೆಯ ಮುಖ ಪ್ರಕಾಶಮಾನವಾಗಿರುವುದನ್ನು ಇಸ್ರಯೇಲರು ಗಮನಿಸುತ್ತಿದ್ದರು. ಆದಕಾರಣ ಅವನು ಸರ್ವೇಶ್ವರನ ಸಂಗಡ ಮಾತಾಡಲು ಹೋಗುವವರೆಗೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡಿರುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು