ಯೋಹಾನ 5:36 - ಕನ್ನಡ ಸತ್ಯವೇದವು C.L. Bible (BSI)36 ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನನಗಂತೂ ಯೋಹಾನನ ಸಾಕ್ಷಿಗಿಂತ ಹೆಚ್ಚಿನ ಸಾಕ್ಷಿ ಉಂಟು; ಹೇಗಂದರೆ ಪೂರೈಸುವದಕ್ಕೆ ತಂದೆ ನನಗೆ ಕೊಟ್ಟಿರುವ ಕೆಲಸಗಳು, ಅಂದರೆ ನಾನು ಮಾಡುವ ಕೆಲಸಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟನೆಂಬದಾಗಿ ನನ್ನ ವಿಷಯದಲ್ಲಿ ಸಾಕ್ಷಿಕೊಡುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 “ಆದರೆ ನನಗೆ ಯೋಹಾನನಿಗಿಂತಲೂ ಮಹಾ ಸಾಕ್ಷಿ ಉಂಟು. ಹೇಗೆಂದರೆ, ತಂದೆ ನನಗೆ ಮಾಡಿ ಮುಗಿಸಲು ಕೊಟ್ಟ ಕೆಲಸಗಳು, ಅಂದರೆ, ನಾನು ಮಾಡುತ್ತಿರುವ ಈ ಕೆಲಸಗಳೇ, ತಂದೆ ನನ್ನನ್ನು ಕಳಿಹಿಸಿದ್ದಾರೆಂದು ನನ್ನನ್ನು ಕುರಿತು ಸಾಕ್ಷಿ ಕೊಡುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಖರೆ ಮಾಜ್ಯಾಕ್ಡೆ ಮಾಜ್ಯಾಚ್ ವಿಶಯಾತ್ ಜುವಾಂವಾಕ್ ದಿಲ್ಲ್ಯಾ ಸಾಕ್ಷಿನ್ಕಿ ಮೊಟಿ ಸಾಕ್ಷಿ ಹಾಯ್! ಜೆ ಕಾಯ್ ಮಿಯಾ ಕರುಲಾಲಾ, ತೆ ಮಾಜ್ಯಾ ಬಾಬಾನುಚ್ ಮಾಕಾ ಕರ್ ಮನುನ್ ದಿಲ್ಲೆ ಹಾಯ್, ಹಿ ಮಿಯಾ ಕರ್‍ತಲಿ ಕಾಮಾಚ್ ಮಾಕಾ ಬಾಬಾನ್ ಧಾಡುನ್ ದಿಲ್ಯಾನಾಯ್ ಮನುನ್ ದಾಕ್ವುನ್ ದಿತ್ಯಾತ್. ಅಧ್ಯಾಯವನ್ನು ನೋಡಿ |