Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:37 - ಕನ್ನಡ ಸತ್ಯವೇದವು C.L. Bible (BSI)

37 ನನ್ನನ್ನು ಕಳುಹಿಸಿದ ಪಿತನೇ ನನ್ನ ಪರವಾಗಿ ಸಾಕ್ಷಿನೀಡಿದ್ದಾರೆ. ನೀವಾದರೋ ಅವರ ಧ್ವನಿಯನ್ನು ಎಂದೂ ಕೇಳಿಲ್ಲ, ಅವರ ದರ್ಶನವನ್ನು ಎಂದೂ ಕಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಧ್ವನಿಯನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅಲ್ಲದೆ ನನ್ನನ್ನು ಕಳುಹಿಸಿದ ತಂದೆಯು ನನ್ನ ಬಗ್ಗೆ ತಾನೇ ಸಾಕ್ಷಿ ಕೊಟ್ಟಿದ್ದಾನೆ. ಆದರೆ ನೀವು ಆತನ ಧ್ವನಿಯನ್ನು ಎಂದೂ ಕೇಳಿಲ್ಲ. ಆತನು ಹೇಗಿದ್ದಾನೆ ಎಂಬುದನ್ನು ನೀವು ಎಂದೂ ಕಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನನ್ನನ್ನು ಕಳುಹಿಸಿದ ತಂದೆ ತಾವೇ ನನ್ನನ್ನು ಕುರಿತು ಸಾಕ್ಷಿ ಹೇಳಿದ್ದಾರೆ. ನೀವು ಎಂದೂ ಅವರ ಸ್ವರವನ್ನು ಕೇಳಲಿಲ್ಲ, ಅವರ ರೂಪವನ್ನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಅನಿ ಮಾಕಾ ಧಾಡುನ್ ದಿಲ್ಲೊ ಬಾಬಾಚ್ ಮಾಜ್ಯಾ ವಿಶಯಾತ್ ಸಾಕ್ಷಿ ದಿತಾ, ತುಮಿ ಕನ್ನಾಬಿ ತೆಚೊ ಧನ್ ಆಯ್ಕುಕ್‍ನ್ಯಾಶಿ ನಾ ಹೊಲ್ಯಾರ್ ತೆಚೆ ತೊಂಡ್ ಬಗುಕ್‍ನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:37
20 ತಿಳಿವುಗಳ ಹೋಲಿಕೆ  

ನಾನು ನನ್ನ ಪರವಾಗಿ ಸಾಕ್ಷಿ ಹೇಳುತ್ತೇನೆ; ನನ್ನನ್ನು ಕಳುಹಿಸಿದ ಪಿತ ಸಹ ನನ್ನ ಪರವಾಗಿ ಸಾಕ್ಷಿ ಹೇಳುತ್ತಾರೆ,” ಎಂದು ನುಡಿದರು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ?


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಆ ಅಗ್ನಿಜ್ವಾಲೆಯಿಂದ ಸರ್ವೇಶ್ವರ ನಿಮ್ಮ ಸಂಗಡ ಮಾತಾಡಿದರು. ಆ ವಾಣಿಯ ಶಬ್ದವನ್ನು ನೀವು ಕೇಳಿದಿರಿ. ಆಕಾರ ಯಾವುದೂ ಕಾಣಿಸಲಿಲ್ಲ, ಸ್ವರ ಮಾತ್ರ ಕೇಳಿಸಿತು.


ಅವರು ಮೋಶೆಗೆ, “ನೀನೇ ನಮ್ಮೊಡನೆ ಮಾತಾಡು, ನಾವು ಕೇಳುತ್ತೇವೆ. ದೇವರು ನಮ್ಮೊಡನೆ ಮಾತಾಡಿದರೆ ನಾವು ಸತ್ತು ಹೋಗುತ್ತೇವೆ,” ಎಂದು ಹೇಳಿದರು.


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.


ಇದಲ್ಲದೆ, “ನೀನೇ ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎನ್ನುವ ದೈವವಾಣಿ ಕೇಳಿಸಿತು.


ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ನನ್ನ ಪರವಾಗಿ ಸಾಕ್ಷಿ ನೀಡುವಾತನು ಇನ್ನೊಬ್ಬನಿದ್ದಾನೆ. ಆತನು ನೀಡುವ ಸಾಕ್ಷ್ಯಕ್ಕೆ ಬೆಲೆಯಿದೆ ಎಂದು ನಾನು ಬಲ್ಲೆ.


ಮನುಷ್ಯರು ಕೊಡುವ ಸಾಕ್ಷ್ಯವನ್ನು ನಾವು ಅಂಗೀಕರಿಸುತ್ತೇವೆ. ದೇವರು ನೀಡುವ ಸಾಕ್ಷ್ಯ ಅದಕ್ಕಿಂತಲೂ ಶ್ರೇಷ್ಠವಾದುದು. ದೇವರ ಈ ಸಾಕ್ಷ್ಯ ಅವರ ಪುತ್ರನನ್ನು ಕುರಿತದ್ದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು