Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:38 - ಕನ್ನಡ ಸತ್ಯವೇದವು C.L. Bible (BSI)

38 ಅವರ ಸಂದೇಶ ನಿಮ್ಮಲ್ಲಿ ನೆಲಸಿಲ್ಲ. ಏಕೆಂದರೆ, ಅವರು ಕಳುಹಿಸಿದವನಲ್ಲಿ ನೀವು ವಿಶ್ವಾಸವಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡದ್ದೂ ಇಲ್ಲ; ಆತನು ಕಳುಹಿಸಿಕೊಟ್ಟವನ ಮಾತನ್ನು ನೀವು ನಂಬದೆ ಇದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ತಂದೆಯ ಉಪದೇಶವು ನಿಮ್ಮಲ್ಲಿ ನೆಲೆಸಿಲ್ಲ. ಏಕೆಂದರೆ ತಂದೆಯು ಕಳುಹಿಸಿರುವಾತನನ್ನು ನೀವು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಅವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವರು ಕಳುಹಿಸಿದವನನ್ನು ನೀವು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಅನಿ ತೆಚಿ ಬರಿ ಖಬರ್ ತುಮಿ ತುಮ್ಚ್ಯಾ ಮನಾತ್ನಿ ಖಬರ್ ಥವ್ನ್ ಘೆವ್ಕನ್ಯಾಶಿ, ಅನಿ ತೆನಿ ಧಾಡಲ್ಲ್ಯಾಚ್ಯಾ ವರ್‍ತಿಬಿ ತುಮಿ ವಿಶ್ವಾಸ್, ಕರಿನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:38
19 ತಿಳಿವುಗಳ ಹೋಲಿಕೆ  

ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು‍ ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ನೀವು ಅಬ್ರಹಾಮನ ವಂಶಜರೆಂದು ನಾನು ಬಲ್ಲೆ. ಆದರೆ ನನ್ನ ಮಾತು ಹಿಡಿಸದ ಕಾರಣ ನನ್ನನ್ನು ಕೊಲ್ಲಲು ಹವಣಿಸುತ್ತೀರಿ.


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು