Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:41 - ಕನ್ನಡ ಸತ್ಯವೇದವು C.L. Bible (BSI)

41 “ನಾನು ಮನುಷ್ಯರಿಂದ ಬರುವ ಗೌರವವನ್ನು ಅರಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 “ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನಾನು ಮನುಷ್ಯರಿಂದಾಗುವ ಮಾನವನ್ನು ಅಂಗೀಕರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 “ಮನುಷ್ಯರಿಂದ ಬರುವ ಹೊಗಳಿಕೆಯು ನನಗೆ ಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ನಾನು ಮನುಷ್ಯರಿಂದ ಮಹಿಮೆಯನ್ನು ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಮಾನ್ಸಾನಿ ಹೊಗಳ್ತಲೆ ಮಾಕಾ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:41
12 ತಿಳಿವುಗಳ ಹೋಲಿಕೆ  

ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.


ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ.


ನನ್ನ ಘನತೆಗೌರವವನ್ನು ನಾನು ಅಪೇಕ್ಷಿಸುವುದಿಲ್ಲ. ಅದನ್ನು ಅಪೇಕ್ಷಿಸುವವರು ಬೇರೊಬ್ಬರಿದ್ದಾರೆ. ನನ್ನ ಪರವಾಗಿ ತೀರ್ಮಾನ ಮಾಡುವುದೂ ಅವರೇ.


ನನಗೆ ಮಾನವ ಸಾಕ್ಷಿ ಬೇಕೆಂದು ಅಲ್ಲ; ಆದರೆ ಇದನ್ನೆಲ್ಲಾ ನಿಮ್ಮ ಉದ್ಧಾರಕ್ಕೆಂದು ನಾನು ಹೇಳುತ್ತಿದ್ದೇನೆ.


ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ.


ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.


ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.


ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.


ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನಾನು ಚೆನ್ನಾಗಿ ಬಲ್ಲೆ.


ದೇವರಿಂದ ದೊರಕುವ ಮನ್ನಣೆಗಿಂತ ಮಾನವರಿಂದ ಸಿಗುವ ಮನ್ನಣೆಯೇ ಅವರಿಗೆ ಪ್ರಿಯವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು