Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:42 - ಕನ್ನಡ ಸತ್ಯವೇದವು C.L. Bible (BSI)

42 ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನಾನು ಚೆನ್ನಾಗಿ ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಆದರೆ ನಿಮ್ಮನ್ನು ನಾನು ಬಲ್ಲೆನು, ದೇವರಲ್ಲಿ ನಿಮಗೆ ಪ್ರೀತಿಯಿಲ್ಲವೆಂದು ನನಗೆ ತಿಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆದರೆ ನಾನು ನಿಮ್ಮನ್ನು ಬಲ್ಲೆನು. ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆದರೆ ನಿಮ್ಮನ್ನು ಬಲ್ಲೆನು. ನಿಮ್ಮ ಹೃದಯದಲ್ಲಿ ದೇವರ ಪ್ರೀತಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಖರೆ ತುಮಿ ಕಸ್ಲಿ ಲೊಕಾ ಮನುನ್ ಮಾಕಾ ಗೊತ್ತ್ ಹಾಯ್, ಅನಿ ದೆವಾಸಾಟಿ ತುಮ್ಚ್ಯಾ ಮನಾತ್ನಿ ಪ್ರೆಮಾಚೊ ನಾ ಮನುನ್ಬಿ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:42
17 ತಿಳಿವುಗಳ ಹೋಲಿಕೆ  

ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?


ಲೋಕಕ್ಕೂ ಲೌಕಿಕವಾದವುಗಳಿಗೂ ನೀವು ಒಲಿಯಬಾರದು. ಈ ಲೋಕವನ್ನು ಒಲಿದರೆ ಪಿತನಲ್ಲಿ ನಿಮಗೆ ಒಲವಿಲ್ಲವೆಂದಾಯಿತು.


ಜನರನ್ನು ಕುರಿತು ಯಾರೂ ಅವರಿಗೆ ತಿಳಿಸಬೇಕಾದ ಪ್ರಮೇಯವಿರಲಿಲ್ಲ. ಮಾನವನ ಅಂತರಂಗ ಅವರಿಗೆ ಬಹಿರಂಗವಾಗಿತ್ತು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.


ದೇವರ ಮಕ್ಕಳು ದೇವರ ಮಾತಿಗೆ ಕಿವಿಗೊಡುತ್ತಾರೆ. ನೀವೋ ದೇವರ ಮಕ್ಕಳಲ್ಲ, ಆದುದರಿಂದಲೇ ಕಿವಿಗೊಡುವುದಿಲ್ಲ,” ಎಂದು ನುಡಿದರು.


ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.


“ನಾನು ಮನುಷ್ಯರಿಂದ ಬರುವ ಗೌರವವನ್ನು ಅರಸುವುದಿಲ್ಲ.


ನಾನು ಬಂದಿರುವುದು ಪಿತನ ಹೆಸರಿನಲ್ಲೇ. ಆದರೂ ನೀವು ನನ್ನನ್ನು ಬರಮಾಡಿಕೊಳ್ಳುವುದಿಲ್ಲ. ಬೇರೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದನೆಂದರೆ ಅಂಥವನನ್ನು ನೀವು ಬರಮಾಡಿಕೊಳ್ಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು