Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:7 - ಕನ್ನಡ ಸತ್ಯವೇದವು C.L. Bible (BSI)

7 “ಸ್ವಾಮೀ, ನೀರು ಉಕ್ಕಿದಾಗ ನನ್ನನ್ನು ಕೊಳಕ್ಕಿಳಿಸಲು ಸಹಾಯಕರು ಇರುವುದಿಲ್ಲ; ನಾನು ಹೋಗುವಷ್ಟರಲ್ಲೇ ಬೇರೆ ಯಾರಾದರೂ ಇಳಿದುಬಿಡುತ್ತಾರೆ,” ಎಂದು ಉತ್ತರಿಸಿದ ಆ ರೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ರೋಗಿಯು - ಸ್ವಾಮೀ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವವರು ಒಬ್ಬರೂ ಇಲ್ಲ; ನಾನು ಬರುವದರೊಳಗೆ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ರೋಗಿಯು, “ಅಯ್ಯಾ, ನೀರು ಉಕ್ಕುವಾಗ ಕೊಳದೊಳಗೆ ಇಳಿದುಹೋಗಲು ನನಗೆ ಯಾರೂ ಸಹಾಯ ಮಾಡುವುದಿಲ್ಲ. ನಾನು ಎಲ್ಲರಿಗಿಂತ ಮೊದಲೇ ನೀರಿಗೆ ಇಳಿಯಲು ಪ್ರಯತ್ನಿಸುವೆ. ಆದರೆ ಪ್ರತಿಸಲವೂ ನನಗಿಂತ ಮೊದಲೇ ಮತ್ತೊಬ್ಬನು ಇಳಿದುಬಿಡುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಆ ರೋಗಿಯು ಯೇಸುವಿಗೆ, “ಸ್ವಾಮಿ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ನನಗೆ ಯಾರೂ ಇಲ್ಲ. ಆದರೆ ನಾನು ಹೋಗುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಹೋಗುತ್ತಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತ್ಯಾ ಶಿಕ್ ಮಾನ್ಸಾನ್ “ಸಾಯ್ಬಾ ಪಾನಿ ಹಲ್ವಲ್ಲ್ಯಾ ತನ್ನಾ ಮಾಕಾ ತಳ್ಯಾತ್ ಘೆವ್ನ್ ಜಾತಲೊ ಕೊನ್ಬಿ ನಾ, ಮಿಯಾ ಜಾವ್ಕ್ ಮನುನ್ ಬಗಲ್ಲ್ಯಾ ತನ್ನಾ ದುಸ್ರೆಚ್ ಕೊನ್ಬಿ ಮಾಜ್ಯಾನ್ ಅದ್ದಿ ಜಾವ್ನ್ ಸೊಡ್ತ್ಯಾತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:7
10 ತಿಳಿವುಗಳ ಹೋಲಿಕೆ  

ಏಕೆನೆ ಕಾಪಾಡುವನಾತ ಮೊರೆಯಿಡುವ ಬಡವರನು I ಉದ್ಧರಿಸುವನಾತ ದಿಕ್ಕಿಲ್ಲದ ದೀನದಲಿತರನು II


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ನಿಮಗೆ ತಿಳಿದಿರುವಂತೆ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಆದರೆ ಪ್ರಥಮ ಬಹುಮಾನ ದೊರಕುವುದು ಒಬ್ಬನಿಗೆ ಮಾತ್ರ. ಅಂತೆಯೇ ಬಹುಮಾನವನ್ನು ಪಡೆದುಕೊಳ್ಳಲು ನೀವೂ ಓಡಿ.


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು.


ಕುರುಡರು, ಕುಂಟರು, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಆ ಮಂಟಪಗಳಲ್ಲಿ ಬಿದ್ದುಕೊಳ್ಳುತ್ತಾ ಇದ್ದರು.


ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ.


ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?’ ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು