Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:11 - ಕನ್ನಡ ಸತ್ಯವೇದವು C.L. Bible (BSI)

11 ಯೇಸು, ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಕುಳಿತಿದ್ದ ಜನರಿಗೆ ಅವುಗಳನ್ನು ಹಂಚಿದರು. ಹಾಗೆಯೇ ಮೀನುಗಳನ್ನೂ ಹಂಚಿಕೊಟ್ಟರು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತರುವಾಯ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಕೂತುಕೊಂಡವರಿಗೆ ಹಂಚಿ ಕೊಟ್ಟನು; ಅದರಂತೆ ಮೀನುಗಳಲ್ಲಿಯೂ ಅವರಿಗೆ ಬೇಕಾದಷ್ಟು ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ಕುಳಿತುಕೊಂಡಿದ್ದ ಜನರಿಗೆ ಕೊಟ್ಟನು. ಆತನು ಮೀನುಗಳನ್ನು ಕೊಡುವಾಗಲೂ ಅದೇ ರೀತಿ ಮಾಡಿದನು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಮೇಲೆ ಯೇಸು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಬೇಕಾದಷ್ಟು ಹಂಚಿದರು. ಅದೇ ರೀತಿಯಲ್ಲಿ ಮೀನುಗಳನ್ನು ಅವರಿಗೆ ಹಂಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆಜುನ್ ಭಾಕ್ರಿ ಘೆಟ್ಲ್ಯಾನ್ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ ಥೈ ಬಸಲ್ಲ್ಯಾ ಲೊಕಾಕ್ನಿ ವಾಟುಕ್ ಲಾವ್ಲ್ಯಾನ್. ಮಾಸೊಳ್ಯಾಬಿ ತೆನಿ ತಸೆಚ್ ಕರುನ್ ವಾಟುಕ್ ಲಾವ್ಲ್ಯಾನ್, ಲೊಕಾನಿ ತೆಂಕಾ ಪಾಜೆ ತವ್ಡೆ ಜೆವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:11
13 ತಿಳಿವುಗಳ ಹೋಲಿಕೆ  

ತಿಬೇರಿಯದಿಂದ ಹೊರಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು. ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ್ದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು.


ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.


ಒಂದು ದಿನವನ್ನು ಮಂಗಳಕರವೆಂದು ಭಾವಿಸುವವನು ಪ್ರಭುವಿಗಾಗಿಯೇ ಆ ರೀತಿ ಭಾವಿಸುತ್ತಾನೆ. ಮಾಂಸವನ್ನು ತಿನ್ನುವವನು ಪ್ರಭುವಿಗಾಗಿಯೇ ತಿನ್ನುತ್ತಾನೆ. ಹೇಗೆಂದರೆ, ತಿನ್ನುವ ಆ ಪದಾರ್ಥಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಸಸ್ಯಾಹಾರಿಯೂ ಪ್ರಭುವಿಗಾಗಿಯೇ ಮಾಂಸವನ್ನು ತಿನ್ನದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.


ಅನಂತರ ಆ ಏಳು ರೊಟ್ಟಿಗಳನ್ನೂ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಸಲ್ಲಿಸಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಟ್ಟರು; ಶಿಷ್ಯರು ಜನರಿಗೆ ಬಡಿಸಿದರು.


ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು.


ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.


ಹೀಗೆ ಹೇಳಿದ ಮೇಲೆ ಪೌಲನು ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಅದನ್ನು ಮುರಿದು ತಿನ್ನಲಾರಂಭಿಸಿದನು.


ಅವರು ಬಲಿಭೋಜನಕ್ಕಾಗಿ ಗುಡ್ಡಕ್ಕೆ ಹೋಗುವ ಮೊದಲೇ ನೀವು ಊರೊಳಕ್ಕೆ ಹೋದರೆ ಸಿಕ್ಕುವರು. ಅವರು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಅವರು ಹೋಗಿ ಬಲಿ ಆಹಾರವನ್ನು ಆಶೀರ್ವದಿಸುತ್ತಾರೆ; ಅನಂತರವೇ ಆಮಂತ್ರಿತರು ಊಟಮಾಡುವುದು. ಈಗಲೇ ಹೋಗಿ; ಅವನು ಸಿಕ್ಕುವ ಸಮಯ ಇದೇ,” ಎಂದರು ಆ ಮಹಿಳೆಯರು.


“ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತದೆ?” ಎಂದನು.


ಅವರು ದಡವನ್ನು ಸೇರಿದಾಗ ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ಮೀನುಗಳಿದ್ದವು. ರೊಟ್ಟಿಯೂ ಅಲ್ಲಿತ್ತು.


ಯೇಸು ಅವರಿಗೆ, “ನೀವು ಈಗ ತಾನೇ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿ,” ಎಂದು ಹೇಳಿದರು.


ಯೇಸುಹತ್ತಿರಕ್ಕೆ ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು, ಹಾಗೆಯೇ ಮೀನನ್ನೂ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು