Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:2 - ಕನ್ನಡ ಸತ್ಯವೇದವು C.L. Bible (BSI)

2 ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬಹು ಜನರ ಗುಂಪು ರೋಗಿಗಳಲ್ಲಿ ಆತನು ನಡಿಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಆತನ ಹಿಂದೆ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಏಕೆಂದರೆ ಯೇಸು ರೋಗಿಗಳನ್ನು ಗುಣಪಡಿಸುವುದರ ಮೂಲಕ ತನ್ನ ಅಧಿಕಾರವನ್ನು ತೋರಿಸಿದ್ದನು. ಅವರೆಲ್ಲರೂ ಅದನ್ನು ನೋಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ರೋಗಿಗಳಲ್ಲಿ ನಡೆಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಜನರ ದೊಡ್ಡ ಗುಂಪು ಯೇಸುವನ್ನು ಹಿಂಬಾಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತ್ಯೆಚ್ಯಾ ಫಾಟ್ನಾ ಲೊಕಾಂಚೊ ಎಕ್ ಮೊಟೊ ತಾಂಡೊ ಹೊತ್ತೊ, ಕಶ್ಯಾಕ್ ಮಟ್ಲ್ಯಾರ್ ತೆನಿ ಜೆಜುನ್ ಶಿಕ್ ಹೊತ್ತ್ಯಾಕ್ನಿ ಗುನ್ ಕರಲ್ಲಿ ಅಜಾಪಾ ಬಗಟಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:2
19 ತಿಳಿವುಗಳ ಹೋಲಿಕೆ  

ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು.


ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.


ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು.


ಯೇಸು ದೋಣಿಯಿಂದ ಇಳಿದಾಗ, ದೊಡ್ಡ ಜನಸಮೂಹವನ್ನು ಕಂಡು ಅವರ ಮನ ಕರಗಿತು; ಅವರಲ್ಲಿ ಅಸ್ವಸ್ಥರಾಗಿದ್ದವರನ್ನು ಗುಣಪಡಿಸಿದರು.


ಯೇಸುಸ್ವಾಮಿ ಬೆಟ್ಟದಿಂದ ಇಳಿದುಬಂದಾಗ ಜನರು ಗುಂಪುಗುಂಪಾಗಿ ಅವರನ್ನು ಹಿಂಬಾಲಿಸಿದರು.


ಜನರು ತಂಡೋಪತಂಡವಾಗಿ ಕೂಡಿಬಂದುದರಿಂದ ದೋಣಿ ಹತ್ತಿ ಕುಳಿತುಕೊಳ್ಳಬೇಕಾಯಿತು. ಜನರು ದಡದಲ್ಲೇ ನಿಂತರು.


ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.


ಯೇಸು ಸ್ವಾಮಿ ಪಾಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅನೇಕರು ಅವರನ್ನು ನಂಬಿದರು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು.


ನೆರೆದಿದ್ದ ಜನರು ಮಾರನೆಯ ದಿನವೂ ಸರೋವರದ ಆಚೆಕಡೆಯೇ ಉಳಿದಿದ್ದರು. ಹಿಂದಿನ ದಿನ ಅಲ್ಲಿ ಒಂದೇ ಒಂದು ದೋಣಿ ಇದ್ದುದನ್ನು ಅವರು ನೋಡಿದ್ದರು. ಯೇಸು ಸ್ವಾಮಿ ಶಿಷ್ಯರೊಡನೆ ದೋಣಿಯನ್ನು ಹತ್ತಲಿಲ್ಲವಾದ್ದರಿಂದ ಶಿಷ್ಯರು ಮಾತ್ರ ಹೊರಟುಹೋಗಿದ್ದಾರೆಂದು ಅವರಿಗೆ ತಿಳಿದಿತ್ತು.


ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ.


ಅದಕ್ಕೆ ಆ ಜನರು, “ನಾವು ನೋಡಿ ನಿಮ್ಮಲ್ಲಿ ವಿಶ್ವಾಸ ಇಡುವಂತೆ ನೀವು ಏನು ಮಾಡುವಿರಿ? ಯಾವ ಸೂಚಕಕಾರ್ಯವನ್ನು ತೋರಿಸುವಿರಿ?


ಮುಖ್ಯಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;


ಈ ಸೂಚಕಕಾರ್ಯವನ್ನು ಕೇಳಿದ್ದ ಕಾರಣದಿಂದಲೂ ಜನರು ಯೇಸುವನ್ನು ಎದುರುಗೊಳ್ಳಲು ಹೋಗಿದ್ದರು.


ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.


ಯೇಸು ತಮ್ಮ ಶಿಷ್ಯರ ಕಣ್ಮುಂದೆ ಮಾಡಿದ ಸೂಚಕಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನು ಈ ಪುಸ್ತಕದಲ್ಲಿ ಬರೆದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು