Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:26 - ಕನ್ನಡ ಸತ್ಯವೇದವು C.L. Bible (BSI)

26 ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸು, “ನೀವು ನನ್ನನ್ನು ಏಕೆ ಹುಡುಕುತ್ತಿದ್ದೀರಿ? ನನ್ನ ಅಧಿಕಾರವನ್ನು ನಿರೂಪಿಸುವ ನನ್ನ ಅದ್ಭುತಕಾರ್ಯಗಳನ್ನು ಕಂಡು ನೀವು ನನ್ನನ್ನು ಹುಡುಕುತ್ತಿದ್ದೀರೋ? ಇಲ್ಲ! ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ರೊಟ್ಟಿಯನ್ನು ತೃಪ್ತಿಯಾಗುವಷ್ಟು ತಿಂದಕಾರಣ ನನ್ನನ್ನು ಹುಡುಕುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಜೆಜುನ್, “ಮಿಯಾ ತುಮ್ಕಾ ಖರೆಚ್! ಸಾಂಗ್ತಾ, ತುಮಿ ಮಿಯಾ ಕರಲ್ಲಿ ಅಜಾಪಾ ಬಗುನ್ ನ್ಹಯ್ ತುಮಿ ಪೊಟ್‍ಬರ್ ಭಾಕ್ರಿಯಾ ಖಾಲ್ಯಾಶಿ ಮನುನ್ ಮಾಕಾ ಹುಡ್ಕುಕ್ ಲಾಗ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:26
20 ತಿಳಿವುಗಳ ಹೋಲಿಕೆ  

ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಇತರರೆಲ್ಲರೂ ಸ್ವಕಾರ್ಯದಲ್ಲಿ ಮಗ್ನರಾಗಿರುವವರೇ ಹೊರತು ಯೇಸುಸ್ವಾಮಿಯ ಕಾರ್ಯದಲ್ಲಿ ನಿರತರಾಗಿಲ್ಲ.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು.


ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ I ಬದ್ಧರಾಗಿರಲಿಲ್ಲ ಆತನ ನಿಬಂಧನೆಗಳಲಿ II


ಯೇಸು ಆಗಲಿ, ಅವರ ಶಿಷ್ಯರಾಗಲಿ ಇಲ್ಲದ್ದನ್ನು ನೋಡಿ ಜನರು ಆ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಫೆರ್ನವುಮಿಗೆ ಬಂದರು.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.)


ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ.


ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಅದಕ್ಕೆ ಆ ಜನರು, “ನಾವು ನೋಡಿ ನಿಮ್ಮಲ್ಲಿ ವಿಶ್ವಾಸ ಇಡುವಂತೆ ನೀವು ಏನು ಮಾಡುವಿರಿ? ಯಾವ ಸೂಚಕಕಾರ್ಯವನ್ನು ತೋರಿಸುವಿರಿ?


ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.


ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು.


ಆದರೆ, ನಾನು ನಿಮಗೆ ಹೇಳಿದಂತೆ, ನೀವು ನನ್ನನ್ನು ನೋಡಿಯೂ ವಿಶ್ವಾಸಿಸದೆ ಇದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು