Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:27 - ಕನ್ನಡ ಸತ್ಯವೇದವು C.L. Bible (BSI)

27 ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಹಾಳ್ ಹೊವ್ನ್ ಜಾತಲ್ಯಾ ಜೆವ್ನಾಸಾಟ್ನಿ ರಾಬುನಕಾಶಿ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಲ್ಯಾ ಜೆವ್ನಾಸಾಟಿ ರಾಬಾ, ಹೆ ಜೆವಾನ್ ತುಮ್ಕಾ ಮಾನ್ಸಾಚೊ ಲೆಕ್ ದಿತಾ, ಕಶ್ಯಾಕ್ ಮಟ್ಲ್ಯಾರ್ ಸರ್ಗಾ ವೈಲ್ಯಾ ಬಾಬಾನ್ ತ್ಯೆಚ್ಯಾವರ್ತಿ ಛಪ್ಪೊ ಮಾರುನ್ ಥವ್ಲ್ಯಾನಾಯ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:27
69 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತಯೇಸುವಿನೊಂದಿಗೆ ಮರಣ ಹೊಂದಿರುವುದರಿಂದ ಅವರೊಂದಿಗೆ ನಿಮ್ಮ ಜೀವ ದೇವರಲ್ಲಿ ಮರೆಯಾಗಿದೆ. ನಿಮ್ಮ ಮನಸ್ಸು ಪ್ರಾಪಂಚಿಕ ವಿಷಯಗಳ ಮೇಲೆ ಅಲ್ಲ, ಸ್ವರ್ಗೀಯ ವಿಷಯಗಳ ಮೇಲೆ ಕೇಂದ್ರೀಕೃತವಾಗಿರಲಿ.


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನಲ್ಲಿ ನಿತ್ಯಜೀವ ಇರುತ್ತದೆ. ಅಲ್ಲದೆ ಅಂತಿಮ ದಿನದಂದು ನಾನು ಅವನನ್ನು ಜೀವಕ್ಕೆ ಎಬ್ಬಿಸುತ್ತೇನೆ.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


“ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು.


ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.


ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ಮಾನವನು ಪಡುವ ಪ್ರಯಾಸವೆಲ್ಲ ಅವನ ಹೊಟ್ಟೆಪಾಡಿಗಾಗಿಯೇ. ಆದರೂ ಅವನಿಗೆ ತೃಪ್ತಿಯಿಲ್ಲ.


ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.


ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.


ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ.


“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.


ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.


ಅದರೊಳಗಿಂದ, “ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು. ಈತನ ಮಾತಿಗೆ ಕಿವಿಗೊಡಿರಿ,” ಎಂಬ ವಾಣಿ ಕೇಳಿಸಿತು.


ನಾನೋಗೊಡುತ ಇಂತೆಂದೆ : “ಇಗೋ ನಾನೇ ಬರುತ್ತಿರುವೆ I ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? II


ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.


ಇವುಗಳೆಲ್ಲವೂ ಬಳಕೆಯಿಂದ ಅಳಿದುಹೋಗುತ್ತವೆ. ಅಲ್ಲದೆ, ಅವೆಲ್ಲವೂ ಮಾನವ ವ್ಯವಸ್ಥಿತ ಬೋಧನೆ ಹಾಗೂ ನಿಬಂಧನೆಗಳು.


ಇತರರಿಗೆ ನಾನು ಪ್ರೇಷಿತನಲ್ಲದಿದ್ದರೂ ನಿಮಗಂತೂ ನಾನು ಪ್ರೇಷಿತನೇ. ನಾನು ಪ್ರೇಷಿತನು ಎಂಬುದಕ್ಕೆ ಪ್ರಭುವಿಗೆ ಸೇರಿದವರಾದ ನೀವೇ ಜೀವಂತ ಸಾಕ್ಷಿಗಳು.


“ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.


ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು.


ನಾನು ನನ್ನ ಪರವಾಗಿ ಸಾಕ್ಷಿ ಹೇಳುತ್ತೇನೆ; ನನ್ನನ್ನು ಕಳುಹಿಸಿದ ಪಿತ ಸಹ ನನ್ನ ಪರವಾಗಿ ಸಾಕ್ಷಿ ಹೇಳುತ್ತಾರೆ,” ಎಂದು ನುಡಿದರು.


ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು.


ಇದಲ್ಲದೆ, “ನೀನೇ ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎನ್ನುವ ದೈವವಾಣಿ ಕೇಳಿಸಿತು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.


ನಮ್ಮ ಗಮನವು ಕೇಂದ್ರೀಕೃತವಾಗಿರುವುದು ಗೋಚರವಾದುವುಗಳ ಮೇಲಲ್ಲ, ಅಗೋಚರವಾದುವುಗಳ ಮೇಲೆ. ಗೋಚರವಾದುವುಗಳು ತಾತ್ಕಾಲಿಕ; ಅಗೋಚರವಾದುವುಗಳು ಶಾಶ್ವತ.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


“ಬನ್ನಿ, ನಾ ಬಡಿಸುವ ಆಹಾರವನ್ನು ಉಣಬನ್ನಿ; ನಾ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಬನ್ನಿ.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು.


ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ.


ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನನ್ನುವಿರಿ?


ಇದು ಸಮುದ್ರದ ಆಚೆ ಇರುವ ಮಾತಲ್ಲ; ‘ನಮಗಾಗಿ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು