Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:35 - ಕನ್ನಡ ಸತ್ಯವೇದವು C.L. Bible (BSI)

35 ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ ಬಾಯಾರಿಕೆಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅವರಿಗೆ - ಜೀವಕೊಡುವ ರೊಟ್ಟಿ ನಾನೇ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ, ನನ್ನನ್ನು ನಂಬುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅದಕ್ಕೆ ಯೇಸು, “ನಾನೇ ಜೀವಕೊಡುವ ರೊಟ್ಟಿ. ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗದು. ನನ್ನಲ್ಲಿ ನಂಬಿಕೆ ಇಡುವವನಿಗೆ ಎಂದಿಗೂ ಬಾಯಾರಿಕೆಯಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾ ಜೆಜುನ್ ತೆಂಕಾ ಸಾಂಗಲ್ಲ್ಯಾನ್, “ಮಿಯಾಚ್ ಜಿವ್ ದಿತಲಿ ಭಾಕ್ರಿ, ಜೆ ಕೊನ್ ಮಾಜ್ಯಾಕ್ಡೆ ಯೆತಾತ್, ತೆಂಕಾ ಕನ್ನಾಬಿ ಭುಕ್ ಲಾಗಿನಾ, ಜೆ ಕೊನ್ ಮಾಜೆ ವರ್ತಿ ವಿಶ್ವಾಸ್, ಕರ್‍ತಾತ್ ತೆಂಕಾ ಕನ್ನಾಚ್ ಸೊಸ್ ಲಾಗಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:35
17 ತಿಳಿವುಗಳ ಹೋಲಿಕೆ  

ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


“ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು.


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ.


“ ‘ಪಿತನು ಅನುಗ್ರಹಿಸಿದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು.


ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.


ಅದಕ್ಕೆ ಆಕೆ, “ಸ್ವಾಮೀ, ಅಂಥ ನೀರನ್ನು ಕೊಡಿ; ಇನ್ನು ಮುಂದೆ ನನಗೆ ದಾಹವಾಗದಿರಲಿ. ನೀರು ಸೇದಲು ಇಷ್ಟು ದೂರ ಬರುವುದು ತಪ್ಪಲಿ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು