Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:39 - ಕನ್ನಡ ಸತ್ಯವೇದವು C.L. Bible (BSI)

39 ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ನಾನು ಕೆಡಗೊಡಿಸದೆ ಅವನನ್ನು ಕಡೇದಿನದಲ್ಲಿ ಎಬ್ಬಿಸಬೇಕೆಂಬದೇ. ಮಗನನ್ನು ನೋಡಿ ಆತನನ್ನು ನಂಬುವ ಪ್ರತಿಯೊಬ್ಬನಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ದೇವರು ನನಗೆ ಕೊಟ್ಟಿರುವ ಯಾವ ವ್ಯಕ್ತಿಯನ್ನೂ ನಾನು ಕಳೆದುಕೊಳ್ಳಕೂಡದು. ಅಲ್ಲದೆ ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸಬೇಕು. ನನ್ನನ್ನು ಕಳುಹಿಸಿದಾತನು ಆ ಕಾರ್ಯವನ್ನೇ ನನ್ನಿಂದ ಅಪೇಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನನ್ನನ್ನು ಕಳುಹಿಸಿಕೊಟ್ಟ ತಂದೆಯ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಕಡೆಯ ದಿನದಲ್ಲಿ ಅವರನ್ನು ಎಬ್ಬಿಸುವುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಮಾಜ್ಯಾ ಹಾತಿತ್ ಒಪ್ಸುನ್ ದಿಲ್ಲ್ಯಾನಿತ್ಲ್ಯಾ ಎಕ್ಲ್ಯಾಕ್‍ಬಿ ಕಳ್ದುನ್ ಘೆವ್ಚೆ ನ್ಹಯ್ ಆಕ್ರಿಚ್ಯಾ ದಿಸಿ ಮಿಯಾ ತೆಂಕಾ ಝಿತ್ತೆ ಕರುನ್ ಉಟ್ವುಚೆ, ಮನ್ತಲಿ ಮಾಕಾ ಧಾಡುನ್ ದಿಲ್ಲ್ಯಾಚಿ ಆಶ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:39
29 ತಿಳಿವುಗಳ ಹೋಲಿಕೆ  

ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.


ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.


(’ನೀವು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ಕಳೆದುಕೊಳ್ಳಲಿಲ್ಲ’ ಎಂದು ತಾವೇ ನುಡಿದ ಮಾತು ನೆರವೇರುವಂತೆ ಯೇಸು ಹೀಗೆಂದರು).


ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನಲ್ಲಿ ನಿತ್ಯಜೀವ ಇರುತ್ತದೆ. ಅಲ್ಲದೆ ಅಂತಿಮ ದಿನದಂದು ನಾನು ಅವನನ್ನು ಜೀವಕ್ಕೆ ಎಬ್ಬಿಸುತ್ತೇನೆ.


ನನ್ನನ್ನು ಕಳುಹಿಸಿಕೊಟ್ಟ ಪಿತನು, ನನ್ನತ್ತ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬಾರರು. ಬಂದವರನ್ನು ನಾನು ಅಂತಿಮ ದಿನದಂದು ಜೀವಕ್ಕೆ ಎಬ್ಬಿಸುತ್ತೇನೆ.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ಇದನ್ನು ಕೇಳಿ ನೀವು ಬೆರಗಾಗುವುದು ಬೇಡ. ಸತ್ತು ಸಮಾಧಿಯಲ್ಲಿರುವವರೆಲ್ಲರೂ ಆತನ ಧ್ವನಿಯನ್ನು ಕೇಳುವ ಕಾಲ ಬರುವುದು.


ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.


ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


“ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ.


“ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ಪ್ರಭುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನೂ ತಮ್ಮ ಪರಾಕ್ರಮದಿಂದ ಎಬ್ಬಿಸುವರು.


ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು