Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:46 - ಕನ್ನಡ ಸತ್ಯವೇದವು C.L. Bible (BSI)

46 ಹಾಗೆಂದ ಮಾತ್ರಕ್ಕೆ ಪಿತನನ್ನು ಯಾರಾದರೂ ಕಣ್ಣಾರೆ ಕಂಡಿದ್ದಾರೆ ಎಂದಲ್ಲ, ದೇವರಿಂದ ಬಂದಿರುವ ಒಬ್ಬನು ಮಾತ್ರ ಪಿತನನ್ನು ಕಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಯಾವನಾದರೂ ತಂದೆಯನ್ನು ನೋಡಿದ್ದಾನೆಂದು ತಿಳಿಯಬೇಡಿರಿ; ದೇವರ ಬಳಿಯಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ತಂದೆಯಿಂದ ಬಂದಿರುವಾತನು ಮಾತ್ರ ತಂದೆಯನ್ನು ನೋಡಿದವನಾಗಿದ್ದಾನೆ. ಬೇರೆ ಯಾವ ವ್ಯಕ್ತಿಯೂ ತಂದೆಯನ್ನು ಎಂದೂ ನೋಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಅಶೆ ಮನುನ್ ಕೊನ್ಬಿ ಬಾಬಾಕ್ ಬಗಟಲ್ಲೊ ಹಾಯ್ ಮನುನ್ ನ್ಹಯ್, ಜೆ ಕೊನ್ ದೆವಾಚೊ ಮನುನ್ ಹಾಯ್ ತೆನಿ ಎಕ್ಲ್ಯಾನುಚ್ ಬಾಬಾಕ್ ಬಗಟ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:46
14 ತಿಳಿವುಗಳ ಹೋಲಿಕೆ  

ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ನಾನಾದರೋ ಆತನನ್ನು ಅರಿತಿದ್ದೇನೆ. ಏಕೆಂದರೆ, ನಾನು ಬಂದುದು ಆತನಿಂದಲೇ. ಆತನೇ ನನ್ನನ್ನು ಕಳುಹಿಸಿದ್ದು,”


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.


ಅದಕ್ಕೆ ಅವರು, “ನಿನ್ನ ಪಿತನೆಲ್ಲಿ?” ಎಂದು ಕೇಳಿದರು. ಯೇಸು, “ನೀವು ನನ್ನನ್ನು ಅರಿತಿಲ್ಲ, ನನ್ನ ಪಿತನನ್ನೂ ಅರಿತಿಲ್ಲ. ನೀವು ನನ್ನನ್ನು ಅರಿತಿದ್ದರೆ, ನನ್ನ ಪಿತನನ್ನೂ ಅರಿಯುತ್ತಿದ್ದಿರಿ,” ಎಂದರು.


ನನ್ನನ್ನು ಕಳುಹಿಸಿದ ಪಿತನೇ ನನ್ನ ಪರವಾಗಿ ಸಾಕ್ಷಿನೀಡಿದ್ದಾರೆ. ನೀವಾದರೋ ಅವರ ಧ್ವನಿಯನ್ನು ಎಂದೂ ಕೇಳಿಲ್ಲ, ಅವರ ದರ್ಶನವನ್ನು ಎಂದೂ ಕಂಡಿಲ್ಲ.


ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು