Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:50 - ಕನ್ನಡ ಸತ್ಯವೇದವು C.L. Bible (BSI)

50 ಸ್ವರ್ಗದಿಂದ ಇಳಿದುಬಂದ ರೊಟ್ಟಿಯಾದರೋ ಹಾಗಲ್ಲ, ಇದನ್ನು ತಿನ್ನುವ ಯಾರಿಗೂ ಸಾವೆಂಬುದು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಪರಲೋಕದಿಂದ ಇಳಿದು ಬರುವಂಥ ಆ ರೊಟ್ಟಿ, ಎಂಥದೆಂದರೆ ಅದನ್ನು ತಿಂದವನು ಎಂದಿಗೂ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಪರಲೋಕದಿಂದ ಇಳಿದುಬರುವ ರೊಟ್ಟಿ ಎಂಥದಂದರೆ ಅದನ್ನು ತಿಂದವನು ಸಾಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಪರಲೋಕದಿಂದ ಇಳಿದುಬರುವ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಎಂದಿಗೂ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಯಾರು ತಿಂದರೂ ಸಾಯದೇ ಇರುವಂತೆ ಪರಲೋಕದಿಂದ ಇಳಿದು ಬಂದ ಜೀವದ ರೊಟ್ಟಿ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಖರೆ ಸರ್ಗಾವೈನಾ, ಉತ್ರುನ್ ಯೆಲ್ಲಿ ಭಾಕ್ರಿ ದುಸ್ರ್ಯಾಚ್ ನಮುನ್ಯಾಚಿ, ಜೆ ಕೊನ್ ಹಿ ಭಾಕ್ರಿ ಖಾತಾ ತೊ ಕನ್ನಾಚ್ ಮರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:50
11 ತಿಳಿವುಗಳ ಹೋಲಿಕೆ  

ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.


ಆದರೆ ಕ್ರಿಸ್ತಯೇಸು ನಿಮ್ಮಲ್ಲಿ ವಾಸಿಸಿದರೆ, ಪಾಪದ ನಿಮಿತ್ತ ನಿಮ್ಮಶರೀರ ಮರಣಕ್ಕೆ ಗುರಿಯಾಗಿದ್ದರೂ ನೀವು ದೇವರೊಡನೆ ಸತ್ಸಂಬಂಧವನ್ನು ಪಡೆದಿರುವುದರಿಂದ ಪವಿತ್ರಾತ್ಮ ನಿಮಗೆ ಜೀವಾಳವಾಗಿರುತ್ತಾರೆ.


ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


ಅವರು, “ಈತನು ಜೋಸೆಫನ ಮಗನಾದ ಯೇಸು ಅಲ್ಲವೆ? ಈತನ ತಂದೆ ತಾಯಿ ನಮಗೆ ಗೊತ್ತಿಲ್ಲವೆ? ಅಂದಮೇಲೆ, ‘ನಾನು ಸ್ವರ್ಗದಿಂದ ಬಂದಿದ್ದೇನೆ,’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.


ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು