Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:53 - ಕನ್ನಡ ಸತ್ಯವೇದವು C.L. Bible (BSI)

53 ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಯೇಸು ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿನ್ನದೆ ಅವನ ರಕ್ತವನ್ನು ಕುಡಿಯದೆ ಹೋದರೆ ನಿಮ್ಮೊಳಗೆ ಜೀವವಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಮನುಷ್ಯಕುಮಾರನ ದೇಹವನ್ನು ತಿನ್ನಲೇಬೇಕು. ಆತನ ರಕ್ತವನ್ನು ಕುಡಿಯಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮಲ್ಲಿ ನಿಜವಾದ ಜೀವ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ಜೆಜುನ್ ತೆಂಕಾ, “ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ತುಮಿ ಮಾನ್ಸಾಚ್ಯಾಲೆಕಾಚೆ ಶರಿರ್ ಖಾಯ್ನಸ್ಲ್ಯಾರ್, ಅನಿ ರಗಾತ್ ಫಿ ನಸ್ಲ್ಯಾರ್ ತುಮ್ಚ್ಯಾ ಭುತ್ತುರ್ ಜಿವುಚ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:53
19 ತಿಳಿವುಗಳ ಹೋಲಿಕೆ  

ಯಾರಲ್ಲಿ ದೇವರ ಪುತ್ರ ಇದ್ದಾನೋ ಅವನಲ್ಲಿ ಆ ಜೀವವಿರುತ್ತದೆ. ಯಾರಲ್ಲಿ ದೇವರ ಪುತ್ರನಿಲ್ಲವೋ ಅವನಲ್ಲಿ ಆ ಜೀವ ಇರುವುದಿಲ್ಲ.


ನನ್ನ ಮಾಂಸವೇ ನಿಜವಾದ ಆಹಾರ; ನನ್ನ ರಕ್ತವೇ ನಿಜವಾದ ಪಾನ.


ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ.


ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


“ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ.


ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.


ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು.


ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ.


“ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು.


ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನನ್ನುವಿರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು