Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:57 - ಕನ್ನಡ ಸತ್ಯವೇದವು C.L. Bible (BSI)

57 ಜೀವಸ್ವರೂಪಿ ಆದ ಪಿತನು ನನ್ನನ್ನು ಕಳುಹಿಸಿಕೊಟ್ಟಿರುವರು. ನಾನು ಅವರಿಂದಲೇ ಜೀವಿಸುತ್ತೇನೆ. ಅಂತೆಯೇ ನನ್ನನ್ನು ಭುಜಿಸುವವನು ನನ್ನಿಂದಲೇ ಜೀವಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಜೀವ ಸ್ವರೂಪನಾದ ತಂದೆಯು ನನ್ನನ್ನು ಕಳುಹಿಸಿಕೊಟ್ಟಿರಲಾಗಿ ನಾನು ತಂದೆಯಿಂದ ಜೀವಿಸುತ್ತೇನೆ; ಅದರಂತೆ ನನ್ನನ್ನು ತಿನ್ನುವವನೇ ನನ್ನಿಂದ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 “ತಂದೆಯೇ ನನ್ನನ್ನು ಕಳುಹಿಸಿದನು. ತಂದೆಯು ಜೀವಸ್ವರೂಪನಾಗಿದ್ದಾನೆ. ನಾನು ತಂದೆಯಿಂದಲೇ ಜೀವಿಸುತ್ತೇನೆ. ಆದ್ದರಿಂದ ನನ್ನನ್ನು ತಿನ್ನುವವನು ನನ್ನಿಂದಲೇ ಜೀವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

57 ಝಿತ್ತ್ಯಾ ಬಾಬಾನ್ ಮಾಕಾ ಧಾಡುನ್ ದಿಲ್ಯಾನಾಯ್ ತೆಚೆಸಾಟ್ನಿ ಮಿಯಾ ಝಿತ್ತೊ ರ್‍ಹಾತಾ, ಅಶೆ ಜೆ ಕೊನ್ ಮಾಕಾ ಖಾತಾತ್. ತೆನಿ ಬಿ ಝಿತ್ತೆ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:57
19 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು.


ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಬಲಹೀನಾವಸ್ಥೆಯಲ್ಲಿ ಅವರನ್ನು ಶಿಲುಬೆಗೇರಿಸಲಾಯಿತು ಎಂಬುದೇನೋ ನಿಜ. ಆದರೆ, ದೇವರ ಶಕ್ತಿಯಿಂದ ಅವರು ಜೀವಂತರಾಗಿದ್ದಾರೆ. ಕ್ರಿಸ್ತಯೇಸುವಿನಲ್ಲಿ ನಾವೂ ಬಲಹೀನರೇ. ಆದರೆ ನಿಮ್ಮ ವಿಷಯದಲ್ಲಿ ವರ್ತಿಸುವಾಗ ದೇವರ ಶಕ್ತಿಯಿಂದ ಯೇಸುಸ್ವಾಮಿಯೊಂದಿಗೆ ಜೀವಂತರಾಗಿದ್ದೇವೆ.


ಆದಾಮನ ಸಂಬಂಧದಿಂದ ಎಲ್ಲರೂ ಸಾವಿಗೀಡಾದಂತೆ ಕ್ರಿಸ್ತಯೇಸುವಿನ ಸಂಬಂಧದಿಂದ ಎಲ್ಲರೂ ಜೀವಂತರಾಗಿ ಏಳುತ್ತಾರೆ.


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಸರ್ವೇಶ್ವರನು ಚೈತನ್ಯಸ್ವರೂಪನು I ನನ್ನುದ್ಧಾರಕನಾದವಗೆ ಸ್ತುತಿಸ್ತೋತ್ರವು I ನನ್ನ ರಕ್ಷಿಸುವ ದೇವರಿಗೆ ಜಯಕಾರವು II


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಅದಕ್ಕೆ ಯೇಸು, “ದೇವರು ಕಳುಹಿಸಿದಾತನನ್ನು ನೀವು ವಿಶ್ವಾಸಿಸಬೇಕು. ಇದೇ ಅವರು ಮೆಚ್ಚುವ ಕಾರ್ಯ,” ಎಂದರು.


ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು