Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:64 - ಕನ್ನಡ ಸತ್ಯವೇದವು C.L. Bible (BSI)

64 ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ಆದರೆ ನಿಮ್ಮಲ್ಲಿ ಕೆಲವರು ನಂಬದವರಾಗಿದ್ದಾರೆ ಅಂದನು. ನಂಬದವರು ಇಂಥವರು, ತನ್ನನ್ನು ಹಿಡುಕೊಡುವವನು ಇಂಥವನು ಎಂಬದು ಯೇಸುವಿಗೆ ಮೊದಲಿನಿಂದ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಆದರೆ ನಿಮ್ಮಲ್ಲಿ ಕೆಲವರು ನಂಬುವುದಿಲ್ಲ” ಎಂದು ಹೇಳಿದನು. (ತನ್ನನ್ನು ನಂಬಿಲ್ಲದವರು ಯಾರೆಂದೂ ತನಗೆ ದ್ರೋಹ ಮಾಡುವವನು ಯಾರೆಂದೂ ಯೇಸುವಿಗೆ ಮೊದಲಿಂದಲೂ ತಿಳಿದಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ,” ಎಂದರು. ನಂಬದವರು ಯಾರೆಂದೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸು ಮೊದಲಿನಿಂದಲೂ ತಿಳಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

64 ಅಜುನ್ಬಿ ತುಮ್ಚ್ಯಾತ್ಲೆ ಉಲ್ಲಿ ಲೊಕಾ ವಿಶ್ವಾಸ್ ಕರಿನ್ಯಾತ್”. ಅದ್ದಿಕ್ನಾ ಅಪ್ನಾಚ್ಯಾ ವಾಗ್ಡಾ ಹೊತ್ತೆಚ್ ವಿಶ್ವಾಸ್ ಧರಿನ್ಯಾತ್ ಅನಿ ಹ್ಯಾತುರ್‍ಲೊಚ್ ಕೊನ್ ತರ್ ಅಪ್ನಾಕ್ ಘಾತ್ ಕರ್‍ತಾ ಮನುನ್ ಜೆಜುಕ್ ಅದ್ದಿಚ್ ಗೊತ್ತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:64
20 ತಿಳಿವುಗಳ ಹೋಲಿಕೆ  

ಆದರೂ ನಿಮಗೆ ನಂಬಿಕೆಯೆಂಬುದಿಲ್ಲ. ಕಾರಣ, ನೀವು ನನ್ನ ಕುರಿಗಳಲ್ಲ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು, “ಇಷ್ಟುಮಾತ್ರಕ್ಕೆ ನೀವು ಕಂಗೆಡಬೇಕೆ?


ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನಾನು ಚೆನ್ನಾಗಿ ಬಲ್ಲೆ.


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ.


ಆದರೆ, ನಾನು ನಿಮಗೆ ಹೇಳಿದಂತೆ, ನೀವು ನನ್ನನ್ನು ನೋಡಿಯೂ ವಿಶ್ವಾಸಿಸದೆ ಇದ್ದೀರಿ.


ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.


“ನೀವು ನರಲೋಕದವರು, ನಾನು ಪರಲೋಕದವನು. ನಿಮ್ಮಂತೆ ನಾನು ಇಹಲೋಕದವನಲ್ಲ.


ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ.


ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರುತಾನೆ ಕೇಳಿಯಾರು?” ಎಂದು ಮಾತನಾಡಿಕೊಂಡರು.


ಯೇಸು ಸ್ವಾಮಿಗೆ ತಮಗೆ ಸಂಭವಿಸಲಿರುವುದೆಲ್ಲವೂ ತಿಳಿದಿತ್ತು. ಎಂದೇ ಮುಂದೆ ಬಂದು, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು