Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:71 - ಕನ್ನಡ ಸತ್ಯವೇದವು C.L. Bible (BSI)

71 ಅವರು ಹೀಗೆ ಹೇಳಿದ್ದು ಸಿಮೋನನ ಮಗ ಇಸ್ಕರಿಯೋತಿನ ಯೂದನನ್ನು ಕುರಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದುಕೊಡಲಿದ್ದ ಗುರುದ್ರೋಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

71 ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

71 ಈ ಮಾತಿನಿಂದ ಆತನು ಸೀಮೋನನ ಮಗನಾದ ಇಸ್ಕರಿಯೋತ ಯೂದನನ್ನು ಸೂಚಿಸಿದನು. ಇವನು ಆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು ಮುಂದೆ ಆತನನ್ನು ಹಿಡುಕೊಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

71 ಯೇಸು ಸಿಮೋನನ ಮಗನಾದ ಇಸ್ಕರಿಯೋತ ಯೂದನ ಬಗ್ಗೆ ಮಾತಾಡುತ್ತಿದ್ದನು. ಯೂದನು ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾಗಿದ್ದನು. ಆದರೆ ಮುಂದೆ ಯೇಸುವಿಗೆ ದ್ರೋಹ ಮಾಡಿದ ವ್ಯಕ್ತಿ ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

71 ಸೀಮೋನನ ಮಗ ಇಸ್ಕರಿಯೋತ ಯೂದನ ವಿಷಯವಾಗಿ ಯೇಸು ಹೀಗೆ ಹೇಳಿದರು. ಏಕೆಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದು ಕೊಡುವುದಕ್ಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

71 ತೊ ಸಿಮಾವ್ ಇಸ್ಕರಿಯೊತಾಚ್ಯಾ ಲೆಕಾ ಜುದಾಸಾಚ್ಯಾ ವಿಶಯಾತ್ ಬೊಲುಲಾಗಲ್ಲೊ, ತೊ ತ್ಯಾ ಬಾರಾ ಜಾನಾ ಶಿಸಾನಿತ್ಲೊ ಹೊಲ್ಯಾರ್ಬಿ ತೆಕಾ ಘಾತ್ ಕರ್‍ನಾರ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:71
19 ತಿಳಿವುಗಳ ಹೋಲಿಕೆ  

ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಯೇಸು, “ನಾನು ರೊಟ್ಟಿಯ ತುಂಡನ್ನು ಬಟ್ಟಲಿನಲ್ಲಿ ಅದ್ದಿ ಅದನ್ನು ಯಾರಿಗೆಕೊಡುತ್ತೇನೋ ಅವನೇ,” ಎಂದು ಹೇಳಿ ರೊಟ್ಟಿಯ ತುಂಡನ್ನು ಅದ್ದಿ ಸಿಮೋನನ ಮಗ ಇಸ್ಕರಿಯೋತಿನ ಯೂದನಿಗೆ ಕೊಟ್ಟರು.


ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II


ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ;


ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ.


ಇದಾದಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಯೇಸುಸ್ವಾಮಿಯನ್ನು ಹಿಡಿದುಕೊಡುವ ದುರುದ್ದೇಶದಿಂದ ಮುಖ್ಯಯಾಜಕರ ಬಳಿಗೆ ಹೋದನು.


ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.


ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.)


ಆಗ ಯೇಸು, “ನಿಮ್ಮಲ್ಲಿ ಹನ್ನೆರಡುಮಂದಿಯನ್ನು ನಾನು ಆಯ್ದುಕೊಂಡೆನಲ್ಲವೆ? ಆದರೂ ನಿಮ್ಮಲ್ಲಿ ಒಬ್ಬನು ಪಿಶಾಚಿಯಾಗಿ ಇದ್ದಾನೆ,” ಎಂದರು.


ಯೇಸುವನ್ನು ಹಿಡಿದುಕೊಡಲಿದ್ದ ಹಾಗೂ ಶಿಷ್ಯರಲ್ಲಿ ಒಬ್ಬನಾಗಿದ್ದ ಇಸ್ಕರಿಯೋತಿನ ಯೂದನು,


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸು ಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು