Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:15 - ಕನ್ನಡ ಸತ್ಯವೇದವು C.L. Bible (BSI)

15 ಅದನ್ನು ಕೇಳಿ ಯೆಹೂದ್ಯ ಅಧಿಕಾರಿಗಳು ಬೆರಗಾದರು. “ಕಲಿಯದಿದ್ದರೂ ಈ ಮನುಷ್ಯನಿಗೆ ಇಷ್ಟೆಲ್ಲಾ ಪಾಂಡಿತ್ಯ ಎಲ್ಲಿಂದ ಬಂದಿತು?” ಎಂದು ವಿಚಾರಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು - ವಿದ್ಯಾಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವದು ಹೇಗೆ ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದ್ಯರಿಗೆ ಆಶ್ಚರ್ಯವಾಯಿತು. “ಈ ಮನುಷ್ಯನು ಎಂದೂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲಿಲ್ಲ. ಇವನು ಇಷ್ಟೆಲ್ಲವನ್ನೂ ಹೇಗೆ ಕಲಿತನು?” ಎಂದು ವಿಚಾರಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೂದ್ಯರು ಆಶ್ಚರ್ಯಪಟ್ಟು, “ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಷ್ಟೆಲ್ಲಾ ಜ್ಞಾನ ತಿಳಿದಿರುವುದು ಹೇಗೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜುದೆವಾಂಚೆ ಅದಿಕಾರಿ ಲೈ ಅಜಾಪ್ ಹೊಲೆ, ಅನಿ “ಹ್ಯೊ ಮಾನುಸ್ ಶಿಕುಕ್‍ನಾ ನಾ ಕಾಯ್ ನಾ, ಎವ್ಡೆ ಸಗ್ಳೆ ಹೆಕಾ ಕಶೆ ಗೊತ್ತ್ ಹಾಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:15
18 ತಿಳಿವುಗಳ ಹೋಲಿಕೆ  

ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, “ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ?


ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.


ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು.


ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು.


ಈ ಮಾತುಗಳನ್ನು ಕೇಳಿ ಅವರೆಲ್ಲರು ಬೆರಗಾದರು; ಯೇಸುವನ್ನು ಬಿಟ್ಟು ಅಲ್ಲಿಂದ ಹೊರಟೇಹೋದರು.


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ಇದನ್ನು ಕೇಳಿದ ಜನರ ಗುಂಪು ಯೇಸುವಿನ ಬೋಧನೆಯನ್ನು ಕುರಿತು ಅತ್ಯಾಶ್ಚರ್ಯಪಟ್ಟಿತು.


ಅವನು ಪರವಶನಾಗಿ ಮಾತಾಡುವುದನ್ನು ಪರಿಚಿತರು ಕಂಡು ತಮ್ಮತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೆ?” ಎಂದು ಮಾತಾಡಿಕೊಳ್ಳುತ್ತಿದ್ದರು.


ಹಬ್ಬದ ಸಮಯದಲ್ಲಿ ಯೆಹೂದ್ಯರು ಯೇಸು ಎಲ್ಲಿದ್ದಾನೆಂದು ಹುಡುಕುತ್ತಿದ್ದರು. ಯೇಸುವನ್ನು ಕುರಿತು ಜನರ ಗುಂಪು ಗುಜುಗುಜು ಮಾತನಾಡುತ್ತಿತ್ತು.


ಯೆಹೂದ್ಯರಿಗೆ ಅಂಜಿ ಅವರಾರೂ ಬಹಿರಂಗವಾಗಿ ಮಾತನಾಡುತ್ತಿರಲಿಲ್ಲ.


ಅವಿದ್ಯಾವಂತರು ಹಾಗೂ ಜನಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತು ಹಚ್ಚಿದರು.


ಅಕ್ಷರವಿಲ್ಲದವನಿಗೆ, “ದಯವಿಟ್ಟು ಇದನ್ನು ಓದು,” ಎಂದು ಒಪ್ಪಿಸಿದರೆ, ಅವನು : “ನನಗೆ ಅಕ್ಷರವಿದ್ಯೆ ಇಲ್ಲ,” ಎನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು