Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:16 - ಕನ್ನಡ ಸತ್ಯವೇದವು C.L. Bible (BSI)

16 ಆಗ ಯೇಸು ಸ್ವಾಮಿ, “ನಾನು ಮಾಡುವ ಬೋಧನೆ ನನ್ನದಲ್ಲ; ನನ್ನನ್ನು ಕಳುಹಿಸಿದಾತನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದಕ್ಕೆ ಯೇಸು “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದಕ್ಕೆ ಯೇಸು - ನಾನು ಹೇಳುವ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದಾತನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು, “ನಾನು ಉಪದೇಶಿಸುವ ಸಂಗತಿಗಳು ನನ್ನ ಸ್ವಂತವಾದವುಗಳಲ್ಲ. ನನ್ನ ಉಪದೇಶವು ನನ್ನನ್ನು ಕಳುಹಿಸಿದಾತನಿಂದ (ದೇವರು) ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ಯೇಸು ಅವರಿಗೆ, “ನನ್ನ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜೆಜುನ್ ತೆಂಕಾ, “ಮಿಯಾ ಶಿಕ್ವುತಲೆ ಮಾಜೆ ಸ್ವತಾಚೆ ಶಿಕಾಪ್ ನ್ಹಯ್, ತೆ ದೆವಾಕ್ನಾ ಯೆತಾ, ತ್ಯೆನಿಚ್ ಮಾಕಾ ಧಾಡ್ವುನ್ ದಿಲಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:16
14 ತಿಳಿವುಗಳ ಹೋಲಿಕೆ  

ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ಪಿತನದೇ.


ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.


ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.


ಎಂದೇ ಯೇಸು ಮತ್ತೆ ಇಂತೆಂದರು: “ನರಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು.


ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದುದನ್ನೇ ಕುರಿತು ನಾವು ಮಾತನಾಡುತ್ತೇವೆ, ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ಧರಿಲ್ಲ.


ನನ್ನನ್ನು ಕಳುಹಿಸಿಕೊಟ್ಟ ಪಿತನು, ನನ್ನತ್ತ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬಾರರು. ಬಂದವರನ್ನು ನಾನು ಅಂತಿಮ ದಿನದಂದು ಜೀವಕ್ಕೆ ಎಬ್ಬಿಸುತ್ತೇನೆ.


ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು.


ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.


ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು