Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:17 - ಕನ್ನಡ ಸತ್ಯವೇದವು C.L. Bible (BSI)

17 ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆ ಕೊನ್ ದೆವಾಕ್ ಕಾಯ್ ಪಾಜೆ ಹೊಲ್ಲೆ ತೆ ಕರ್‍ತಾ ತೆಕಾ ಮಿಯಾ ಶಿಕ್ವುತಲೆ ದೆವಾಕ್ನಾ ಯೆಲಾ ಕಾಯ್, ಮಿಯಾ ಮಾಜ್ಯಾಚ್ ಅದಿಕಾರ್‍ಯಾನ್ ಬೊಲುಲಾ ಮನುನ್ ಸ್ವತಾಚೆ ಕಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:17
25 ತಿಳಿವುಗಳ ಹೋಲಿಕೆ  

ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.


ದೇವರ ಮಕ್ಕಳು ದೇವರ ಮಾತಿಗೆ ಕಿವಿಗೊಡುತ್ತಾರೆ. ನೀವೋ ದೇವರ ಮಕ್ಕಳಲ್ಲ, ಆದುದರಿಂದಲೇ ಕಿವಿಗೊಡುವುದಿಲ್ಲ,” ಎಂದು ನುಡಿದರು.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ I ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ II


“ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ವಕ್ರಬುದ್ಧಿಯವನು ಸರ್ವೇಶ್ವರನಿಗೆ ಅಸಹ್ಯನು, ಸತ್ಯಸಂಧರು ಆತನಿಗೆ ಪ್ರೀತಿಪಾತ್ರರು.


ಕೆಟ್ಟವರು ನ್ಯಾಯ ನೀತಿಯನ್ನು ಗ್ರಹಿಸರು; ಸರ್ವೇಶ್ವರನ ಭಕ್ತರು ಅದನ್ನು ಪೂರ್ತಿಯಾಗಿ ಗ್ರಹಿಸುವರು.


ಸತ್ಯಸಂಧನಾದರೋ ಬೆಳಕಿನ ಬಳಿಗೆ ಬರುತ್ತಾನೆ. ತಾನು ಮಾಡುವುದು ದೇವರು ಮೆಚ್ಚುವುದನ್ನೇ ಎಂಬುದನ್ನು ತೋರ್ಪಡಿಸುತ್ತಾನೆ.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು