Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:27 - ಕನ್ನಡ ಸತ್ಯವೇದವು C.L. Bible (BSI)

27 ಲೋಕೋದ್ಧಾರಕನು ಕಾಣಿಸಿಕೊಳ್ಳುವಾಗ ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿದಿರುವುದಿಲ್ಲ. ಆದರೆ ಈತನು ಎಲ್ಲಿಂದ ಬಂದವರೆಂದು ನಮ್ಮೆಲ್ಲರಿಗೂ ತಿಳಿದಿದೆಯಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೂ ಇವನು ಎಲ್ಲಿಯವನೆಂದು ಬಲ್ಲೆವು; ಕ್ರಿಸ್ತನು ಬರುವಾಗ ಅವನು ಎಲ್ಲಿಯವನೋ ಒಬ್ಬರಿಗೂ ತಿಳಿಯುವದಿಲ್ಲವೆಂದು ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಈ ಮನುಷ್ಯನ ಮನೆಯು ಎಲ್ಲಿದೆ ಎಂಬುದು ನಮಗೆ ಗೊತ್ತಿದೆ. ಅಲ್ಲದೆ, ಕ್ರಿಸ್ತನು ಬಂದಾಗ, ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿಯುವುದಿಲ್ಲ” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ಈತನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು. ಆದರೂ ಕ್ರಿಸ್ತನು ಬಂದಾಗ ಆತನು ಎಲ್ಲಿಂದ ಬಂದವನೆಂದು ಯಾರಿಗೂ ತಿಳಿಯದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮೆಸ್ಸಿಯಾ ಯೆಲ್ಲ್ಯಾತನ್ನಾ ತೊ ಖೈತ್ನಾ ಯೆಲಾ ಮನುನ್ ಕೊನಾಕ್ಬಿ ಗೊತ್ತ್ ರ್‍ಹಾಯ್ನಾ. ಹ್ಯೊ ಮಾನುಸ್ ಖೈತ್ನಾ ಯೆಲಾ ಮನುನ್ ಅಮ್ಕಾ ಗೊತ್ತ್ ಹಾಯ್” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:27
14 ತಿಳಿವುಗಳ ಹೋಲಿಕೆ  

ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಮೋಶೆಯೊಡನೆ ದೇವರು ಮಾತನಾಡಿದರು ಎಂಬುದನ್ನು ನಾವು ಬಲ್ಲೆವು. ಆದರೆ ಇವನು ಎಲ್ಲಿಯವನೋ ನಾವು ಅರಿಯೆವು,” ಎಂದರು.


ಅವರು, “ಈತನು ಜೋಸೆಫನ ಮಗನಾದ ಯೇಸು ಅಲ್ಲವೆ? ಈತನ ತಂದೆ ತಾಯಿ ನಮಗೆ ಗೊತ್ತಿಲ್ಲವೆ? ಅಂದಮೇಲೆ, ‘ನಾನು ಸ್ವರ್ಗದಿಂದ ಬಂದಿದ್ದೇನೆ,’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.


ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು.


ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಆತನನ್ನು ಅವಮಾನಪಡಿಸಲಾಯಿತು ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕಜೀವವನ್ನೇ ಮೊಟಕುಗೊಳಿಸಲಾಯಿತು.”


ಅದನ್ನು ಕೇಳಿ ಯೆಹೂದ್ಯ ಅಧಿಕಾರಿಗಳು ಬೆರಗಾದರು. “ಕಲಿಯದಿದ್ದರೂ ಈ ಮನುಷ್ಯನಿಗೆ ಇಷ್ಟೆಲ್ಲಾ ಪಾಂಡಿತ್ಯ ಎಲ್ಲಿಂದ ಬಂದಿತು?” ಎಂದು ವಿಚಾರಿಸತೊಡಗಿದರು.


ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು ಮರುಗಲಿಲ್ಲ ಕನಿಕರದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು