Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:30 - ಕನ್ನಡ ಸತ್ಯವೇದವು C.L. Bible (BSI)

30 ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇದಕ್ಕಾಗಿ ಆತನನ್ನು ಹಿಡಿಯುವದಕ್ಕೆ ನೋಡುತ್ತಿದ್ದರು; ಆದರೆ ಆತನ ಕಾಲ ಇನ್ನೂ ಬಾರದೆ ಇದ್ದಕಾರಣ ಯಾರೂ ಆತನ ಮೇಲೆ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇದನ್ನು ಕೇಳಿ ಜನರು ಆತನನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸುವಿನ ಮೇಲೆ ಕೈಹಾಕಲು ಯಾರಿಗೂ ಸಾಧ್ಯವಿರಲಿಲ್ಲ, ಏಕೆಂದರೆ ಯೇಸುವನ್ನು ಕೊಲ್ಲಲು ಇನ್ನೂ ಸರಿಯಾದ ಸಮಯ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಸಮಯ ಇನ್ನೂ ಬಾರದೆ ಇದ್ದುದರಿಂದ ಅವರ ಮೇಲೆ ಯಾರೂ ಕೈಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ತೆನಿ ತೆಕಾ ಧರುಕ್ ಬಗಟ್ಲ್ಯಾನಿ, ಖರೆ ಕೊನಾಕ್ಬಿ ತೆಕಾ ಹಾತ್ ಲಾವುಕ್ ಹೊವುಕ್ನಾ, ಕಶ್ಯಾಕ್ ಮಟ್ಲ್ಯಾರ್ ಅಜುನ್ ತೆಚೊ ಎಳ್ ಯೆವ್ಕ್ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:30
22 ತಿಳಿವುಗಳ ಹೋಲಿಕೆ  

ಮತ್ತೊಮ್ಮೆ ಯೇಸುವನ್ನು ಬಂಧಿಸಲು ಆ ಯೆಹೂದ್ಯರು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡರು.


ಮಹಾದೇವಾಲಯದೊಳಗೆ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಕೋಣೆಯಲ್ಲಿ ಯೇಸು ಮಾತನಾಡುತ್ತಾ ಹೇಳಿದ ಮಾತುಗಳಿವು. ಅವರ ಗಳಿಗೆ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.


ಅದಕ್ಕೆ ಯೇಸು, “ನನಗೆ ಸೂಕ್ತ ಸಮಯ ಇನ್ನೂ ಬಂದಿಲ್ಲ, ನಿಮಗಾದರೋ ಎಲ್ಲಾ ಸಮಯವೂ ಒಂದೇ.


ಯೇಸು ಸ್ವಾಮಿಯನ್ನು ಕುರಿತು ಜನರು ಹೀಗೆ ಆಡುತ್ತಿದ್ದ ಗುಸುಗುಸು ಮಾತು ಫರಿಸಾಯರ ಕಿವಿಗೆ ಮುಟ್ಟಿತು. ಅವರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸಲು ಕಾಲಾಳುಗಳನ್ನು ಕಳುಹಿಸಿದರು.


ಯೇಸುವನ್ನು ಬಂಧಿಸುವ ಉದ್ದೇಶದಿಂದ ಮುಖ್ಯಯಾಜಕರೂ ಫರಿಸಾಯರೂ ಆತನ ಸುಳಿವು ಯಾರಿಗಾದರೂ ಸಿಕ್ಕಿದ್ದೇ ಆದರೆ ತಮಗೆ ತಿಳಿಸಬೇಕೆಂದು ಆಜ್ಞೆ ಹೊರಡಿಸಿದ್ದರು.


ಹಗಲಿರುವಾಗಲೇ ನನ್ನನ್ನು ಕಳುಹಿಸಿದಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸ ಮಾಡಲಾಗದು.


ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.


ನೀವು ಅಬ್ರಹಾಮನ ವಂಶಜರೆಂದು ನಾನು ಬಲ್ಲೆ. ಆದರೆ ನನ್ನ ಮಾತು ಹಿಡಿಸದ ಕಾರಣ ನನ್ನನ್ನು ಕೊಲ್ಲಲು ಹವಣಿಸುತ್ತೀರಿ.


ಮೋಶೆ ಕೊಟ್ಟ ಧರ್ಮಶಾಸ್ತ್ರ ನಿಮಗಿದೆಯಲ್ಲವೇ, ಆದರೂ ಅದಕ್ಕೆ ಸರಿಯಾಗಿ ನಡೆಯುವವರಾರೂ ನಿಮ್ಮಲ್ಲಿ ಇಲ್ಲ. ನನ್ನನ್ನು ಕೊಲ್ಲಬೇಕೆಂದು ನೀವು ಹವಣಿಸುವುದೇಕೆ?” ಎಂದರು.


ಹಬ್ಬಕ್ಕೆ ನೀವೇ ಹೋಗಿರಿ, ನನಗೆ ಸಮಯವು ಇನ್ನೂ ಬಂದಿಲ್ಲವಾದ ಕಾರಣ ನಾನು ಹಬ್ಬಕ್ಕೆ ಈಗ ಹೋಗುವುದಿಲ್ಲ,” ಎಂದು ಹೇಳಿ


ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.


ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಏಕೆಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ - ಜನರೆಲ್ಲರೂ ಅವರ ಬೋಧನೆಗೆ ಮಾರುಹೋಗಿದ್ದರು.


ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ, ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಆಗ ಯೆಹೂದ್ಯರು, ಅವರತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು.


ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು