Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:37 - ಕನ್ನಡ ಸತ್ಯವೇದವು C.L. Bible (BSI)

37 ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆ ಜಾತ್ರೆಯ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು - ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಸನಾಚ್ಯಾ ಆಕ್ರಿಚ್ಯಾ ಅನಿ ಲೈ ಮಹತ್ವಾಚ್ಯಾ ದಿಸಿ ಜೆಜು ಇಬೆ ರ್‍ಹಾಲೊ ಅನಿ ಮೊಟ್ಯಾನ್, “ಜೆ ಕೊನ್ ಸೊಸೆನ್ ಹಾತ್ ತೆನಿ ಮಾಜಾಕ್ಡೆ ಯೆಂವ್ದಿತ್ ಅನಿ ಫಿಂವ್ದಿತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:37
50 ತಿಳಿವುಗಳ ಹೋಲಿಕೆ  

ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು.


ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ I ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? II


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.


ನನ್ನ ಮಾಂಸವೇ ನಿಜವಾದ ಆಹಾರ; ನನ್ನ ರಕ್ತವೇ ನಿಜವಾದ ಪಾನ.


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


‘ಎಂಟನೆಯ ದಿನ, ದೇವಾರಾಧನೆಗೆ ಸಭೆಕೂಡಬೇಕು. ಅಂದು ಯಾವ ದುಡಿಮೆಯನ್ನೂ ಮಾಡಕೂಡದು.


ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು.


ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಎಂಟನೆಯ ದಿನದಂದು ದೇವಾರಾಧನೆಗಾಗಿ ಸಭೆಸೇರಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಅಂದು ಎಲ್ಲ ದುಡಿಮೆಯನ್ನು ನಿಲ್ಲಿಸಬೇಕು.


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.


ಅದಕ್ಕೆ ಯೊವಾನ್ನನು, “ಪ್ರಭುವಿನ ಮಾರ್ಗವನ್ನು ನೇರಗೊಳಿಸಿರೆಂದು ಬೆಂಗಾಡಿನಲ್ಲಿ ಕೂಗುವವನ ಸ್ವರವೇ ನಾನು,” ಎಂದು ಯೆಶಾಯ ಪ್ರವಾದಿಯ ಮಾತುಗಳಲ್ಲೇ ಉತ್ತರಕೊಟ್ಟನು.


ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.


ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ:


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


“ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು : ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಆ ವಾಣಿ ಮತ್ತೆ ಕೇಳಿಸಿತು : ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು : “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ.


ಎಜ್ರನು, ಮೊದಲನೆಯ ದಿನದಿಂದ ಕಡೆಯ ದಿನದವರೆಗೂ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು ಜನರಿಗೆ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನ ಮುಕ್ತಾಯ ಸಮಾರಂಭಕ್ಕಾಗಿ ಸಭೆಕೂಡಿದರು.


ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ - ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಸರ್ವೇಶ್ವರ ನೇಮಿಸಿದ ಪರ್ಣಕುಟೀರಗಳ ಜಾತ್ರೆಯನ್ನು ಏಳುದಿನದವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿ ಹಾಗು ಎಂಟನೆಯ ದಿನದಲ್ಲಿ ಎಲ್ಲ ದುಡಿಮೆಯನ್ನು ನಿಲ್ಲಿಸಿ ಸಂಪೂರ್ಣ ವಿರಾಮದಿಂದಿರಬೇಕು.


ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ: ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ನಗರದ ಹೆಬ್ಬಾಗಿಲುಗಳಲ್ಲೂ ಜನಸೇರುವ ಪ್ರವೇಶದ್ವಾರಗಳಲ್ಲೂ ಘೋಷಿಸುತ್ತಾಳೆ ಹೀಗೆಂದು:


“ಸರ್ವೇಶ್ವರನಿಗೆ ಮಾರ್ಗವನ್ನು ನೇರಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ,” ಎಂದಾಗ ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ.


ನಗರದ ರಾಜಬೀದಿಗಳಿಗೆ ತನ್ನ ದಾಸಿಯರನ್ನು ಕಳುಹಿಸುತ್ತಾಳೆ.


ಕೇಳಿ, ಜ್ಞಾನವೆಂಬಾಕೆ ಕರೆಯುತ್ತಾಳೆ ವಿವೇಕವೆಂಬಾಕೆ ಕೂಗಿ ಕರೆಯುತ್ತಿದ್ದಾಳೆ!


ಜ್ಞಾನವೆಂಬಾಕೆ ಹಾದಿಗಳಲ್ಲಿ ಕೂಗುತ್ತಾ ಇದ್ದಾಳೆ; ಬೀದಿಚೌಕಗಳಲ್ಲಿ ದನಿಗೈಯುತ್ತಾ ಇದ್ದಾಳೆ;


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪುಗುಂಪಾಗಿ ಚಲಿಸುವ ಸಕಲವಿಧ ಜಲಜಂತುಗಳು ಬದುಕಿ ಬಾಳುವುವು; ಮೀನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.


ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ಅದಕ್ಕೆ ಆಕೆ, “ನೀರು ಸೇದುವುದಕ್ಕೆ ನಿಮ್ಮಲ್ಲಿ ಏನೂ ಇಲ್ಲ, ಬಾವಿಯೂ ಆಳವಾಗಿದೆ; ಹೀಗಿರುವಲ್ಲಿ ನಿಮಗೆ ಜೀವಜಲ ಎಲ್ಲಿಂದ ಬಂದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು