Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:38 - ಕನ್ನಡ ಸತ್ಯವೇದವು C.L. Bible (BSI)

38 ಪವಿತ್ರಗ್ರಂಥದಲ್ಲಿ ಹೇಳಿರುವಂತೆ, ‘ನನ್ನಲ್ಲಿ ವಿಶ್ವಾಸವಿಡುವವನ ಹೃದಯದಿಂದ ಜೀವಜಲ ಹೊನಲುಹೊನಲಾಗಿ ಹರಿಯುವುದು,’ “ ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ನನ್ನನ್ನು ನಂಬಿದವನ ಹೊಟ್ಟೆಯೊಳಗಿಂದ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಜೀವಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನನ್ನಲ್ಲಿ ನಂಬಿಕೆ ಇಡುವವನ ಹೊಟ್ಟೆಯೊಳಗಿಂದ ಜೀವಕರವಾದ ನೀರಿನ ಹೊಳೆಗಳು ಹರಿಯುತ್ತವೆ. ಪವಿತ್ರ ಗ್ರಂಥವು ತಿಳಿಸುವುದು ಇದನ್ನೇ” ಎಂದು ಗಟ್ಟಿಯಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಪವಿತ್ರ್ ಪುಸ್ತಕ್ ಮನ್ತಾ 'ಜೆ ಕೊನ್ ಮಾಜೆರ್ ವಿಶ್ವಾಸ್ ಕರ್‍ತಾತ್ ತೆಂಚ್ಯಾ ಭುತ್ತುರುಚ್ ಜಿವ್‍ದಿತಲ್ಯಾ ಪಾನಿಯಾಚೆ ಝರೆ ಫುಟ್ತಾತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:38
16 ತಿಳಿವುಗಳ ಹೋಲಿಕೆ  

ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ಸಜ್ಜನನ ಬಾಯಿ ಜೀವದ ಬುಗ್ಗೆ; ದುರ್ಜನನ ಬಾಯಿತುಂಬ ಚಿತ್ರಹಿಂಸೆ.


ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.


ಸತ್ಪುರುಷನ ನುಡಿ ಜಲನಿಧಿ; ಜ್ಞಾನದ ಬುಗ್ಗೆ ಹರಿಯುವ ತೊರೆ.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಹೋದರರಲ್ಲಿ, ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸುವರು. ಅವನಿಗೆ ಮಾತ್ರ ಕಿವಿಗೊಡಬೇಕು.


ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.


ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ.


ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು