Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:4 - ಕನ್ನಡ ಸತ್ಯವೇದವು C.L. Bible (BSI)

4 ಪ್ರಖ್ಯಾತನಾಗಬೇಕೆಂದಿರುವ ಯಾರೂ ತನ್ನ ಕಾರ್ಯಗಳನ್ನು ಮರೆಯಲ್ಲಿ ಮಾಡುವುದಿಲ್ಲ, ಇವನ್ನೆಲ್ಲಾ ನೀನು ಮಾಡುವುದಾದರೆ ಲೋಕಕ್ಕೆ ಪ್ರಕಟವಾಗುವಂತೆ ಮಾಡಬೇಕು,” ಎಂದು ಯೇಸುವಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ತಾನು ಮಾಡುವದನ್ನು ಮರೆಯಲ್ಲಿ ಮಾಡುವದಿಲ್ಲವಲ್ಲಾ; ನೀನು ಇಂಥ ಕಾರ್ಯಗಳನ್ನು ಮಾಡುವವನಾದ್ದರಿಂದ ಲೋಕಕ್ಕೆ ತಿಳಿಯಪಡಿಸಿಕೋ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತನ್ನ ಬಗ್ಗೆ ಜನರಿಗೆ ತಿಳಿಯಬೇಕೆಂದು ಅಪೇಕ್ಷಿಸುವವನು ತಾನು ಮಾಡುವ ಕಾರ್ಯಗಳನ್ನು ಮರೆಮಾಡಕೂಡದು. ನಿನ್ನನ್ನು ಈ ಲೋಕಕ್ಕೆ ತೋರಿಸಿಕೊ. ನೀನು ಮಾಡುವ ಕಾರ್ಯಗಳನ್ನು ಅವರು ನೋಡಲಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಪ್ರಖ್ಯಾತನಾಗಲು ಬಯಸುವ ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದಾದರೆ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ,” ಎಂದು ಯೇಸುವಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖಲೊ ಮಾನುಸ್ ಬಿ ಲೊಕಾಚ್ಯಾ ಫಿಡೆ ಬರೊ ಹೊವ್ಕ್ ಹೊತಾ ಅಪ್ನಾಚಿ ಅಪ್ನಿ ಕರ್‍ತಲಿ ಕಾಮಾ ನಿಪುನ್-ನಿಪುನ್ ಕರಿನಾ ತಿಯಾ ಅಜಾಪಾ ಕರುನ್ ದಾಕ್ವುವುಚೆ ತಸೆಮನುನ್ ತಿಯಾ ಕರ್‍ತಲಿ ಕಾಮಾ ಸಗ್ಳ್ಯಾ ಜಗಾಕ್ ಕಳಿ ಸಾರ್ಕೆ ಕರ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:4
12 ತಿಳಿವುಗಳ ಹೋಲಿಕೆ  

ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.


ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ.


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.


“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


“ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು.


ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು, “ನೋಡಿ, ಎಲ್ಲಾ ಪ್ರವಾದಿಗಳು ಏಕಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂದೆ ತಿಳಿಸುತ್ತಾರೆ; ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.


“ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಅಲ್ಲಿ ನೀನು ಮಾಡುವುದನ್ನೆಲ್ಲಾ ನಿನ್ನ ಅನುಯಾಯಿಗಳು ನೋಡಲಿ.


ಅವರ ಸೋದರರಿಗೆ ಕೂಡ ಅವರಲ್ಲಿ ವಿಶ್ವಾಸವಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು