Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:42 - ಕನ್ನಡ ಸತ್ಯವೇದವು C.L. Bible (BSI)

42 ‘ಆತ ದಾವೀದ ವಂಶಜನು; ಆತನು ಹುಟ್ಟುವುದು ದಾವೀದನ ಊರಾದ ಬೆತ್ಲೆಹೇಮಿನಲ್ಲಿ’ ಎಂದು ಪವಿತ್ರಗ್ರಂಥವೇ ಹೇಳಿದೆಯಲ್ಲವೆ?” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಇನ್ನೂ ಕೆಲವರು - ಕ್ರಿಸ್ತನು ಗಲಿಲಾಯದಿಂದ ಬರುವದು ಹೇಗೆ? ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬದಾಗಿ ಶಾಸ್ತ್ರದಲ್ಲಿ ಉಂಟಲ್ಲವೇ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಕ್ರಿಸ್ತನು ದಾವೀದನ ಕುಟುಂಬದವನೆಂತಲೂ ದಾವೀದನು ವಾಸಿಸಿದ ಬೆತ್ಲೆಹೇಮ್ ಊರಿನಿಂದ ಆತನು ಬರುತ್ತಾನೆಂತಲೂ ಪವಿತ್ರ ಗ್ರಂಥವು ತಿಳಿಸುತ್ತದೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ‘ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತ್ಲೆಹೇಮೆಂಬ ಊರಿನಿಂದಲೂ ಬರುವನು,’ ಎಂದು ಪವಿತ್ರ ವೇದವು ಹೇಳುತ್ತದಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಪವಿತ್ರ್ ಪುಸ್ತಕ್ ಮನ್ತಾ “ಮೆಸ್ಸಿಯಾ ದಾವಿದ್ ರಾಜಾಚ್ಯಾ ಘರಾನ್ಯಾಚೊ ಅನಿ ತೊ ದಾವಿದಾನ್ ಜಿವನ್ ಕರಲ್ಲ್ಯಾ ಬೆತ್ಲೆಹೆಮಾತ್ ಉಪಾಜ್ತಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:42
17 ತಿಳಿವುಗಳ ಹೋಲಿಕೆ  

ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಅದಕ್ಕೆ ಅವರು, “ಜುದೇಯದಲ್ಲಿರುವ ಬೆತ್ಲೆಹೇಮಿನಲ್ಲೇ ಹುಟ್ಟುವನು; ಏಕೆಂದರೆ :


ಜೋಸೆಫನು ದಾವೀದನ ಮನೆತನದವನು ಹಾಗೂ ಗೋತ್ರದವನು. ಆದುದರಿಂದ ಅವನೂ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಹೊರಟು ಜುದೇಯ ನಾಡಿನ ಬೆತ್ಲೆಹೇಮೆಂಬ ದಾವೀದನ ಊರಿಗೆಹೋದನು.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


“ಸ್ಥಾಪಿಸುವೆ ಶಾಶ್ವತವಾಗಿ ನಿನ್ನ ಸಂತತಿಯನು I ಸ್ಥಿರಪಡಿಸುವೆ ಯುಗಯುಗಕು ನಿನ್ನ ಸಿಂಹಾಸನವನು” II


ಸೇವಕರಲ್ಲೊಬ್ಬನು ಅವನಿಗೆ, “ಬೆತ್ಲೆಹೇಮಿನವನಾದ ಜೆಸ್ಸೆಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲನು. ಅವನು ಪರಾಕ್ರಮಶಾಲಿ, ರಣಶೂರ, ವಾಕ್ಚತುರ, ಸುಂದರ ಹಾಗು ಸರ್ವೇಶ್ವರನ ಅನುಗ್ರಹ ಹೊಂದಿದವ,” ಎಂದು ತಿಳಿಸಿದನು.


ಲೋಕೋದ್ಧಾರಕನು ಕಾಣಿಸಿಕೊಳ್ಳುವಾಗ ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿದಿರುವುದಿಲ್ಲ. ಆದರೆ ಈತನು ಎಲ್ಲಿಂದ ಬಂದವರೆಂದು ನಮ್ಮೆಲ್ಲರಿಗೂ ತಿಳಿದಿದೆಯಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಸೌಲನು ಅವನನ್ನು, “ತರುಣನೇ, ನೀನು ಯಾರ ಮಗ?” ಎಂದು ಕೇಳಿದನು. ಅದಕ್ಕೆ ಅವನು, “ನಾನು ಬೆತ್ಲೆಹೇಮಿನವನೂ ನಿಮ್ಮ ಸೇವಕನೂ ಆದ ಜೆಸ್ಸೆಯನ ಮಗ,” ಎಂದು ಉತ್ತರಿಸಿದನು.


ಸರ್ವೇಶ್ವರ ಹೇಳಿದಂತೆಯೇ ಸಮುವೇಲನು ಬೆತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುನಡುಗುತ್ತಾ ಬಂದು, ಅವನನ್ನು ಎದುರುಗೊಂಡು, “ನಿನ್ನ ಆಗಮನ ನಮಗೆ ಶುಭಕರವಾಗಿದೆಯೇ?’ ಎಂದು ಕೇಳಿದರು. ಅವನು,


‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


ಅವನ ಇನ್ನೊಬ್ಬ ಮಗ ಸಲ್ಮ ಬೆತ್ಲೆಹೇಮನ್ನೂ ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು