Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:48 - ಕನ್ನಡ ಸತ್ಯವೇದವು C.L. Bible (BSI)

48 ನಮ್ಮ ಮುಖಂಡರಲ್ಲಾಗಲಿ, ಫರಿಸಾಯರಲ್ಲಾಗಲಿ, ಯಾರಾದರೂ ಅವನನ್ನು ನಂಬಿದ್ದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಹಿರೀಸಭೆಯವರಲ್ಲಿಯಾಗಲಿ ಫರಿಸಾಯರಲ್ಲಿಯಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ನಾಯಕರಲ್ಲಿ ಯಾರಾದರೂ ಯೇಸುವಿನಲ್ಲಿ ನಂಬಿಕೆ ಇಟ್ಟಿದ್ದಾರೋ? ಇಲ್ಲ! ಫರಿಸಾಯರಾದ ನಮ್ಮಲ್ಲಿ ಯಾರಾದರೂ ಆತನನ್ನು ನಂಬಿದ್ದಾರೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಯೇಸುವನ್ನು ನಂಬಿದ್ದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 “ಕನ್ನಾಬಿ ತುಮ್ಕಾ ಅದಿಕಾರ್‍ಯಾನಿತ್ಲೊ ಎಕ್ಲೊ ನಾ ಹೊಲ್ಯಾರ್ ಫಾರಿಜೆವಾನಿತ್ಲೊ ಎಕ್ಲೊ ತೆಚೆವರ್ತಿ ವಿಶ್ವಾಸ್ ಕರ್‍ತಾ ಮನುನ್ ಗೊತ್ತ್ ಹಾಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:48
12 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲಿ ಹಲವುಮಂದಿ ಮುಖಂಡರಿಗೆ ಯೇಸುವಿನಲ್ಲಿ ವಿಶ್ವಾಸಮೂಡಿತು. ಆದರೆ ಫರಿಸಾಯರು ಪ್ರಾರ್ಥನಾಮಂದಿರಗಳಿಂದ ತಮಗೆ ಬಹಿಷ್ಕಾರ ಹಾಕಿಯಾರೆಂಬ ಅಂಜಿಕೆಯ ಕಾರಣ ಅವರು ತಮ್ಮ ವಿಶ್ವಾಸವನ್ನು ಬಯಲುಮಾಡಲಿಲ್ಲ.


ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.


ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?


ಇಗೋ, ಈತ ಬಹಿರಂಗವಾಗಿ ಮಾತನಾಡುತ್ತಿದ್ದಾನೆ. ಆದರೂ ಈತನಿಗೆ ವಿರುದ್ಧವಾಗಿ ಅವರಾರೂ ಮಾತೆತ್ತುತ್ತಿಲ್ಲ! ಈತನೇ ಲೋಕೋದ್ಧಾರಕನೆಂದು ಆ ಮುಖಂಡರಿಗೆ ಹೊಳೆದಿರಬಹುದೆ?


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


ಅಲ್ಲಿದ್ದ ಫರಿಸಾಯರಲ್ಲಿ ನಿಕೊದೇಮನು ಒಬ್ಬನು. ಹಿಂದೆ ಯೇಸುವನ್ನು ಕಾಣಲು ಬಂದಿದ್ದವನು ಈತನೇ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಪಿಲಾತನು ಮುಖ್ಯಯಾಜಕರನ್ನೂ ಮುಖಂಡರನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ,


ಅಲ್ಲಿ ನಿಕೊದೇಮನೆಂಬ ಫರಿಸಾಯನು ಇದ್ದನು.


ಧರ್ಮಶಾಸ್ತ್ರದ ಗಂಧವೂ ಇಲ್ಲದ ಜನಜಂಗುಳಿ ಶಾಪಗ್ರಸ್ತವಾಗಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು