Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:52 - ಕನ್ನಡ ಸತ್ಯವೇದವು C.L. Bible (BSI)

52 ಅದಕ್ಕೆ ಅವರು, “ನೀನೂ ಗಲಿಲೇಯದವನೋ? ಪವಿತ್ರಗ್ರಂಥವನ್ನು ಓದಿನೋಡು; ಗಲಿಲೇಯದಿಂದ ಯಾವ ಪ್ರವಾದಿಯೂ ತಲೆಯೆತ್ತುವುದಿಲ್ಲ, ಎಂಬುದು ನಿನಗೇ ಗೊತ್ತಾಗುತ್ತದೆ,” ಎಂದು ಮರುತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಅವರು - ನೀನೂ ಗಲಿಲಾಯದವನೋ? ಗಲಿಲಾಯದಲ್ಲಿ ಪ್ರವಾದಿ ಹುಟ್ಟುವದೇ ಇಲ್ಲ, ವಿಚಾರಿಸಿ ನೋಡು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಯೆಹೂದ್ಯನಾಯಕರು, “ನೀನೂ ಗಲಿಲಾಯದವನೋ? ಪವಿತ್ರ ಗ್ರಂಥವನ್ನು ಅಧ್ಯಯನಮಾಡು. ಗಲಿಲಾಯದಿಂದ ಯಾವ ಪ್ರವಾದಿಯೂ ಬರುವುದಿಲ್ಲವೆಂಬುದು ಆಗ ನಿನಗೆ ತಿಳಿಯುತ್ತದೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ತನ್ನಾ ತೆನಿ,“ಬರೆ ಜಾಲ್ಯಾರ್, ತಿಯಾಬಿ ಗಾಲಿಲಿಯಾತ್ಲೊ ಕಾಯ್? ಪವಿತ್ರ್ ಪುಸ್ತಕ್ ವಾಚ್, ಗಾಲಿಲಿಯಾತ್ನಾ ಕನ್ನಾಬಿ ಪ್ರವಾದಿ ಯೆಯ್ನಾ ಮನುನ್ ತಿಯಾ ಶಿಕ್ತೆ” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:52
11 ತಿಳಿವುಗಳ ಹೋಲಿಕೆ  

ಇನ್ನೂ ಕೆಲವರು, “ಈತನೇ ಲೋಕೋದ್ಧಾರಕ,” ಎಂದರು. ಮತ್ತೆ ಕೆಲವರು, “ಲೋಕೋದ್ಧಾರಕ ಗಲಿಲೇಯದಿಂದ ಬರುವುದುಂಟೇ?


ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು.


ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು, ನಮಗೇ ಬುದ್ಧಿಹೇಳಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.


ಅದಕ್ಕೆ ಅವನು, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿದವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದುಹಾಕಬೇಕೆಂದಿರುವೆಯಾ?” ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, “ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!” ಎಂದು ಅಂಜಿದನು.


ಅವರಾದರೋ, “ಬಿಡು ದಾರಿ, ಪ್ರವಾಸಿಯಾಗಿ ಬಂದ ಇವನು ನಮಗೆ ನ್ಯಾಯಹೇಳುವವನಾಗಿಬಿಟ್ಟ! ದಾರಿ ಬಿಡದಿದ್ದರೆ ಆ ಮನುಷ್ಯರಿಗಿಂತ ನಿನಗೇ ಹೆಚ್ಚು ಕೇಡಾದೀತು,” ಎಂದು ಹೇಳಿ ಲೋಟನ ಮೇಲೆ ಬಿದ್ದು ತುಳಿದು ಬಾಗಿಲನ್ನು ಒಡೆದುಹಾಕುವುದರಲ್ಲಿದ್ದರು.


ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.


ಬಳಿಕ ಎಲ್ಲರೂ ತಮ್ಮತಮ್ಮ ಮನೆಗಳಿಗೆ ತೆರಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು