Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:7 - ಕನ್ನಡ ಸತ್ಯವೇದವು C.L. Bible (BSI)

7 ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹ್ಯೊ ಜಗ್ ತುಮ್ಚೊ ದ್ವೆಸ್ ಕರಿನಾ ಖರೆ ತೊ ಮಾಜೊ ದ್ವೆಸ್ ಕರ್‍ತಾ ಕಶ್ಯಾಕ್ ಮಟ್ಲ್ಯಾರ್ ಮಿಯಾ ತೆಚಿ ವಾಟಾ ಬುರ್ಶ್ಯಾ ಹಾತ್ ಮನುನ್ ಸಾಂಗುಂಗೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:7
27 ತಿಳಿವುಗಳ ಹೋಲಿಕೆ  

ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು: ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು.


ಹೀಗಿರಲಾಗಿ ಸತ್ಯವನ್ನು ನುಡಿಯುವುದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೇ?


ಅವರು ಲೋಕಕ್ಕೆ ಸೇರಿದವರು. ಆದ್ದರಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ. ಎಂದೇ, ಲೋಕವು ಅವರಿಗೆ ಕಿವಿಗೊಡುತ್ತದೆ.


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.


ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ.


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ಕುಚೋದ್ಯನಿಗೆ ಬೇಡ ಬುದ್ಧಿವಾದ; ಅವನಿಗೆ ಬೇಡ ಜ್ಞಾನಿಗಳ ಸತ್ಸಂಘ.


ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.


ಉಪಕಾರಕ್ಕೆ ಅಪಕಾರವನ್ನೆಸಗಿಹರು I ಗೆಳೆತನಕ್ಕೆ ಹಗೆತನವನ್ನೇ ತೋರಿಹರು II


ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಬಾವಿನಲ್ಲಿ ಮಾಂಸ ಕಾಣಿಸಿದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು