ಯೋಹಾನ 8:12 - ಕನ್ನಡ ಸತ್ಯವೇದವು C.L. Bible (BSI)12 ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಳಿಕ, ಯೇಸುವು ಜನರೊಂದಿಗೆ ಮತ್ತೆ ಮಾತಾಡುತ್ತಾ, “ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ಎಂದಿಗೂ ಜೀವಿಸುವುದಿಲ್ಲ. ಅವನು ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜೆಜುನ್ ಅನಿ ಪರ್ತುನ್ ಲೊಕಾಂಚ್ಯಾಕ್ಡೆ ಬೊಲುನ್ ಅಶೆ ಮಟ್ಲ್ಯಾನ್ “ಮಿಯಾಚ್ ಜಗಾಚೊ ಉಜ್ವೊಡ್ ಜೊ ಕೊನ್ ಮಾಜಿ ಫಾಟ್ ಧರ್ತಾ ತೊ ಕಾಳ್ಕಾತ್ ಚಲಿನಾ, ಖರೆ ತೆಕಾ ಜಿವಿತಾಚೊ ಉಜ್ವೊಡ್ ಘೆವ್ನ್ ರ್‍ಹಾತಾ”. ಅಧ್ಯಾಯವನ್ನು ನೋಡಿ |