Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:16 - ಕನ್ನಡ ಸತ್ಯವೇದವು C.L. Bible (BSI)

16 ನಾನು ತೀರ್ಪುಕೊಟ್ಟರೂ ಅದು ಯಥಾರ್ಥವಾದುದು. ಕಾರಣ, ತೀರ್ಪುಕೊಡುವವನು ನಾನೊಬ್ಬನೇ ಅಲ್ಲ; ನನ್ನನ್ನು ಕಳುಹಿಸಿದ ಪಿತ ಸಹ ನನ್ನೊಡನೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಬ್ಬಂಟಿಗನಲ್ಲ, ನನ್ನನ್ನು ಕಳುಹಿಸಿಕೊಟ್ಟ ನನ್ನ ತಂದೆಯೂ ನನ್ನ ಜೊತೆಯಲ್ಲಿ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತೀರ್ಪುಮಾಡಿದರೂ ನನ್ನ ತೀರ್ಪು ಸರಿಯಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ; ನಾನೂ ನನ್ನನ್ನು ಕಳುಹಿಸಿಕೊಟ್ಟ ತಂದೆಯೂ ಇಬ್ಬರು ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಮಾಡುವ ತೀರ್ಪು ನ್ಯಾಯಬದ್ಧವಾಗಿರುತ್ತದೆ. ಏಕೆಂದರೆ ನಾನು ತೀರ್ಪು ಮಾಡುವಾಗ ಒಬ್ಬಂಟಿಗನಾಗಿರುವುದಿಲ್ಲ. ನನ್ನನ್ನು ಕಳುಹಿಸಿದ ತಂದೆಯೂ ನನ್ನೊಂದಿಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಂಟಿಗನಲ್ಲ. ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಮಿಯಾ ತಸೆಕರ್ಲ್ಯಾರ್ ಬಿ ಮಾಜೊ ನಿರ್‍ನಯ್ ಖರೊ, ಕಶ್ಯಾಕ್ ಮಟ್ಲ್ಯಾರ್ ಹ್ಯಾತುರ್ ಮಿಯಾ ಎಕ್ಲೊಚ್ ನಾವ್ ಮಾಕಾ ಧಾಡುನ್ ದಿಲ್ಲೊ ಬಾಬಾಚ್ ಮಾಜ್ಯಾ ವಾಂಗ್ಡಾ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:16
15 ತಿಳಿವುಗಳ ಹೋಲಿಕೆ  

ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಕಿಯಾಗಿ ಬಿಟ್ಟಿಲ್ಲ.”


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು