Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:19 - ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ಅವರು, “ನಿನ್ನ ಪಿತನೆಲ್ಲಿ?” ಎಂದು ಕೇಳಿದರು. ಯೇಸು, “ನೀವು ನನ್ನನ್ನು ಅರಿತಿಲ್ಲ, ನನ್ನ ಪಿತನನ್ನೂ ಅರಿತಿಲ್ಲ. ನೀವು ನನ್ನನ್ನು ಅರಿತಿದ್ದರೆ, ನನ್ನ ಪಿತನನ್ನೂ ಅರಿಯುತ್ತಿದ್ದಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದರು. ಅದಕ್ಕೆ ಯೇಸು, “ನೀವು ನನ್ನನ್ನೂ ತಿಳಿದಿಲ್ಲ ಹಾಗೂ ನನ್ನ ತಂದೆಯನ್ನೂ ತಿಳಿದಿಲ್ಲ. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿದಿರುವಿರಿ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು - ನಿನ್ನ ತಂದೆ ಎಲ್ಲಿದ್ದಾನೆ? ಎಂದು ಕೇಳಲು ಯೇಸು - ನೀವು ನನ್ನನ್ನೂ ತಿಳಿದಿಲ್ಲ, ನನ್ನ ತಂದೆಯನ್ನೂ ತಿಳಿದಿಲ್ಲ; ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ತಿಳಿದಿರುವಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜನರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದು ಕೇಳಿದರು. ಯೇಸು, “ನಿಮಗೆ ನಾನಾಗಲಿ, ನನ್ನ ತಂದೆಯಾಗಲಿ ಗೊತ್ತಿಲ್ಲ. ನೀವು ನನ್ನನ್ನು ತಿಳಿದಿದ್ದರೆ, ನನ್ನ ತಂದೆಯನ್ನು ಸಹ ತಿಳಿದಿರುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಅವರು, “ನಿನ್ನ ತಂದೆ ಎಲ್ಲಿ?” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ತಿಳಿದಿಲ್ಲ, ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿಯುತ್ತಿದ್ದೀರಿ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆನಿ ತೆಕಾ “ತುಜೊ ಬಾಬಾ ಖೈ ಹಾಯ್?” ಮನುನ್ ಇಚಾರ್‍ಲ್ಯಾನಿ. ಜೆಜುನ್ ತೆಂಕಾ ಜವಾಬ್ ದಿವ್ನ್ “ಮಾಕಾಬಿ ತುಮಿ ವಳ್ಕಿನ್ಯಾಶಿ, ಅನಿ ಮಾಜ್ಯಾ ಬಾಬಾಕ್ ಬಿ ತುಮಿ ವಳ್ಕಿನ್ಯಾಶಿ, ಮಾಕಾ ತುಮಿ ವಳಕ್ಲ್ಯಾರ್ ಮಾಜ್ಯಾ ಬಾಬಾಕ್‍ಬಿ ತುಮಿ ವಳ್ಕಿ ಹೊತ್ತ್ಯಾಶಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:19
24 ತಿಳಿವುಗಳ ಹೋಲಿಕೆ  

ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.


ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ: ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ.


ದಿವ್ಯವಾಣಿ ಲೋಕದಲ್ಲಿ ಇದ್ದರು. ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆಹೋಯಿತು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು.


ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು