Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:2 - ಕನ್ನಡ ಸತ್ಯವೇದವು C.L. Bible (BSI)

2 ಮರುದಿನ ಮುಂಜಾನೆ ಅವರು ಮತ್ತೆ ಮಹಾದೇವಾಲಯಕ್ಕೆ ಬಂದರು. ಜನರು ಸುತ್ತಲೂ ಬಂದು ನೆರೆಯಲು ಯೇಸು ಕುಳಿತುಕೊಂಡು ಬೋಧಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಜನರೆಲ್ಲರು ಆತನ ಬಳಿಗೆ ಬಂದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮರುದಿನ ನಸುಕಿನಲ್ಲೇ ಯೇಸು ದೇವಾಲಯಕ್ಕೆ ಮರಳಿ ಹೋದನು. ಎಲ್ಲಾ ಜನರು ಯೇಸುವಿನ ಬಳಿಗೆ ನೆರೆದುಬಂದರು. ಯೇಸು ಕುಳಿತುಕೊಂಡು ಜನರಿಗೆ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬೆಳಿಗ್ಗೆ ಯೇಸು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಅವರ ಬಳಿಗೆ ಬಂದರು. ಯೇಸು ಕುಳಿತುಕೊಂಡು ಅವರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೊ ಪರ್ತುನ್ ದೆವಾಚ್ಯಾ ಗುಡಿಕ್ಡೆ ಗೆಲೊ ಸಗ್ಳಿ ಲೊಕಾ ತೆಚ್ಯಾ ಭೊತ್ಯಾನಿ ಗೊಳಾ ಹೊಲ್ಲಿ, ತನ್ನಾ ತೊ ಖಾಲ್ತಿ ಬಸುನ್ ಲೊಕಾಕ್ನಿ ಶಿಕ್ವುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:2
14 ತಿಳಿವುಗಳ ಹೋಲಿಕೆ  

ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.


ಯೇಸುಸ್ವಾಮಿ ಹಗಲೆಲ್ಲಾ ಮಹಾದೇವಾಲಯದಲ್ಲಿ ಬೋಧಿಸುತ್ತಿದ್ದರು. ರಾತ್ರಿಯಲ್ಲಿ ಪಟ್ಟಣದಿಂದ ಹೊರಟು, ಓಲಿವ್ ತೋಪಿನ ಗುಡ್ಡದಲ್ಲಿ ತಂಗುತ್ತಿದ್ದರು.


ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.


ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು.


ಮಹಾದೇವಾಲಯದೊಳಗೆ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಕೋಣೆಯಲ್ಲಿ ಯೇಸು ಮಾತನಾಡುತ್ತಾ ಹೇಳಿದ ಮಾತುಗಳಿವು. ಅವರ ಗಳಿಗೆ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


“ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಅವರು ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದಾರೆ. ನಾನು ಅವರಿಗೆ ಎಡೆಬಿಡದೆ ಬೋಧಿಸುತ್ತಾ ಬಂದರೂ ನನ್ನ ಉಪದೇಶವನ್ನು ಅಂಗೀಕರಿಸಲಿಲ್ಲ, ನನಗೆ ಕಿವಿಗೊಡಲೂ ಇಲ್ಲ.


ಅವರ ಬೋಧನೆಯನ್ನು ಕೇಳಲು ಜನರೆಲ್ಲರೂ ಸೂರ್ಯೋದಯಕ್ಕೆ ಮುಂಚೆಯೇ ಎದ್ದು ದೇವಾಲಯಕ್ಕೆ ಬರುತ್ತಿದ್ದರು.


ಆಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಒಬ್ಬ ಹೆಂಗಸನ್ನು ಅಲ್ಲಿಗೆ ಕರೆತಂದರು; ಅವಳು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಳು.


ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು