Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:28 - ಕನ್ನಡ ಸತ್ಯವೇದವು C.L. Bible (BSI)

28 ಎಂದೇ ಯೇಸು ಮತ್ತೆ ಇಂತೆಂದರು: “ನರಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದ ಆತನು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೇರಿಸುವಿರಿ (ಕೊಲ್ಲುವಿರಿ). ನಾನೇ ಆತನೆಂಬುದು ಆಗ ನಿಮಗೆ ತಿಳಿಯುವುದು. ನಾನು ಈ ಕಾರ್ಯಗಳನ್ನು ನನ್ನ ಸ್ವಂತ ಅಧಿಕಾರದಿಂದ ಮಾಡುತ್ತಿಲ್ಲ ಎಂಬುದನ್ನು ನೀವು ತಿಳಿದುಕೊಳ್ಳುವಿರಿ. ಅಲ್ಲದೆ, ತಂದೆಯು ನನಗೆ ಉಪದೇಶಿಸಿದ ಸಂಗತಿಗಳನ್ನು ಮಾತ್ರ ನಾನು ಹೇಳುತ್ತೇನೆಂಬುದೂ ನಿಮಗೆ ಅರಿವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ನೀವು ಮೇಲಕ್ಕೇರಿಸಿದಾಗ ‘ನಾನೇ ಆತನು’ ಎಂದು ನಿಮಗೆ ತಿಳಿಯುವುದು. ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ಬೋಧಿಸಿದಂತೆ ನಾನು ಈ ಸಂಗತಿಗಳನ್ನು ಮಾತನಾಡುತ್ತೇನೆ ಎಂದೂ ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತಸೆಮನುನ್ ಜೆಜುನ್ ತೆಂಕಾ, “ತುಮಿ ಮಾನ್ಸಾಚ್ಯಾಲೆಕಾಕ್ ವೈರ್ ಉಕಲಲ್ಲ್ಯಾ ತನ್ನಾ, ಮಿಯಾ ಕೊನ್ ಮನುನ್ ತುಮ್ಕಾ ಕಳ್ತಾ. ಖರೆ ಮಿಯಾ ಕರ್‍ತಲೆ ಮಾಜ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಕಾಯ್ ಬಿ ಕರಿನಾ ಹೊಲಾ ಮನುನ್ ತುಮ್ಕಾ ಕಳ್ತಾ. ಮಿಯಾ ಖಾಲಿ ಮಾಜ್ಯಾ ಬಾಬಾನ್ ಮಾಕಾ ಸಾಂಗುನ್ ಧಾಡಲ್ಲ್ಯಾ ಸರ್ಕೆ ಸಾಂಗುಲಾಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:28
28 ತಿಳಿವುಗಳ ಹೋಲಿಕೆ  

“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.


ಯೇಸು ಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು.


ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ಅಲ್ಲಿ ಯೇಸುವನ್ನು ಶಿಲುಬೆಗೇರಿಸಿದರು. ಅವರ ಅಕ್ಕಪಕ್ಕದಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು.


ನ್ಯಾಯನೀತಿಯ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ.


ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು.


ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.


ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದುದನ್ನೇ ಕುರಿತು ನಾವು ಮಾತನಾಡುತ್ತೇವೆ, ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ಧರಿಲ್ಲ.


ಆಗ ದೇವರು ಹೀಗೆಂದರು: “ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ 'ತಾನಾಗಿ ಇರುವವನು,' ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾನೆ ಎಂದು ಹೇಳು.”


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಅನೇಕರು ‘ನಾನೇ ಕ್ರಿಸ್ತ, ನಾನೇ ಕ್ರಿಸ್ತ,’ ಎನ್ನುತ್ತಾ ನನ್ನ ಹೆಸರನ್ನೇ ಹೇಳಿಕೊಂಡು ಬರುವರು. ಮಾತ್ರವಲ್ಲ, ಎಷ್ಟೋ ಜನರನ್ನು ತಪ್ಪುದಾರಿಗೆಳೆಯುವರು.


ಅನೇಕರು ನನ್ನ ಹೆಸರನ್ನು ಇಟ್ಟುಕೊಂಡು ಬಂದು, ‘ನಾನೇ ಕ್ರಿಸ್ತ’, ‘ನಾನೇ ಕ್ರಿಸ್ತ’ ಎನ್ನುತ್ತಾ ಎಷ್ಟೋ ಜನರನ್ನು ತಪ್ಪುದಾರಿಗೆ ಎಳೆಯುವರು.


ಅದಕ್ಕೆ ಯೇಸುಸ್ವಾಮಿ, “ನೀವು ಮೋಸಹೋಗದಂತೆ ಜಾಗರೂಕರಾಗಿರಿ. ‘ಅನೇಕರು ನಾನೇ ಆತ, ನಾನೇ ಆತ,’ ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, ‘ಕಾಲವು ಸಮೀಪಿಸಿಬಿಟ್ಟಿತು,’ ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ.


ಆಗ ಯೇಸು, “ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದು ನುಡಿದರು.


ಯೇಸು ಸ್ವಾಮಿ ತಮ್ಮ ಪಿತನನ್ನು ಕುರಿತು ಹೀಗೆನ್ನುತ್ತಿದ್ದಾರೆಂದು ಅವರು ಅರಿತುಕೊಳ್ಳಲಿಲ್ಲ.


ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.


ಅದು ಈಡೇರುವಾಗ ‘ಇರುವಾತನು ನಾನೇ’ ಎಂದು ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ಹೇಳುತ್ತಿದ್ದೇನೆ.


ಯೇಸು ತಮಗೆ ಯಾವ ಬಗೆಯ ಮರಣ ಕಾದಿರುವುದೆಂದು ಸೂಚಿಸಿ ಹೇಳಿದ ಮಾತು ಹೀಗೆ ನೆರವೇರುವಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು