Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:29 - ಕನ್ನಡ ಸತ್ಯವೇದವು C.L. Bible (BSI)

29 ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಕಿಯಾಗಿ ಬಿಟ್ಟಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ, ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವದರಿಂದ ಆತನು ನನ್ನನ್ನು ಒಂಟಿಗನಾಗಿ ಬಿಡಲಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನನ್ನನ್ನು ಕಳುಹಿಸಿದಾತನು (ದೇವರು) ನನ್ನೊಂದಿಗೆ ಇದ್ದಾನೆ. ಆತನಿಗೆ ಮೆಚ್ಚಿಕೆಯಾದದ್ದನ್ನೇ ನಾನು ಯಾವಾಗಲೂ ಮಾಡುತ್ತೇನೆ. ಆದ್ದರಿಂದ ಆತನು ನನ್ನನ್ನು ಒಬ್ಬಂಟಿಗನಾಗಿ ಬಿಟ್ಟುಬಿಟ್ಟಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನನ್ನನ್ನು ಕಳುಹಿಸಿದ ತಂದೆ ನನ್ನ ಸಂಗಡ ಇದ್ದಾರೆ. ಅವರು ನನ್ನನ್ನು ಒಬ್ಬಂಟಿಗನನ್ನಾಗಿ ಬಿಡಲಿಲ್ಲ, ಏಕೆಂದರೆ ಅವರಿಗೆ ಮೆಚ್ಚಿದವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಅನಿ ಮಾಕಾ ಧಾಡುನ್ ದಿಲ್ಲೊ ಮಾಜ್ಯಾ ವಾಂಗ್ಡಾ ಹಾಯ್, ತೆನಿ ಮಾಕಾ ಎಕ್ಲ್ಯಾಕುಚ್ ಸೊಡುನ್ ದಿವ್ಕನಾ, ಕಶ್ಯಾಕ್ ಮಟ್ಲ್ಯಾರ್ ಮಿಯಾ ಕನ್ನಾಬಿ ತೆಕಾ ಒಪ್ಪ್ ಹೊಲ್ಲೆಚ್ ಕರ್‍ತಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:29
25 ತಿಳಿವುಗಳ ಹೋಲಿಕೆ  

ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ನಾನು ತೀರ್ಪುಕೊಟ್ಟರೂ ಅದು ಯಥಾರ್ಥವಾದುದು. ಕಾರಣ, ತೀರ್ಪುಕೊಡುವವನು ನಾನೊಬ್ಬನೇ ಅಲ್ಲ; ನನ್ನನ್ನು ಕಳುಹಿಸಿದ ಪಿತ ಸಹ ನನ್ನೊಡನೆ ಇದ್ದಾರೆ.


ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು. ಏಳಿ, ಇಲ್ಲಿಂದ ಹೋಗೋಣ,” ಎಂದರು.


ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಸರ್ವೇಶ್ವರ ಮುಕ್ತಿದಾತನಾದುದರಿಂದ ಧರ್ಮಶಾಸ್ತ್ರಕ್ಕೆ ಮಹಿಮೆಯಿತ್ತು ಅದನ್ನು ಮಹತ್ತಾಗಿಸಿದ.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.


ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು