Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಒಬ್ಬ ಹೆಂಗಸನ್ನು ಅಲ್ಲಿಗೆ ಕರೆತಂದರು; ಅವಳು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶಾಸ್ತ್ರಿಗಳೂ ಮತ್ತು ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಒಬ್ಬ ಹೆಂಗಸನ್ನು ಹಿಡಿದು ಆತನ ಬಳಿಗೆ ತಂದು ಆಕೆಯನ್ನು ಅವರ ಗುಂಪಿನ ಮಧ್ಯದಲ್ಲಿ ನಿಲ್ಲಿಸಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಕೂತುಕೊಂಡು ಅವರಿಗೆ ಉಪದೇಶಮಾಡುತ್ತಿರುವಲ್ಲಿ ಶಾಸ್ತ್ರಿಗಳೂ ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಧರ್ಮೋಪದೇಶಕರು ಮತ್ತು ಫರಿಸಾಯರು ಒಬ್ಬ ಸ್ತ್ರೀಯನ್ನು ಅಲ್ಲಿಗೆ ಕರೆದುಕೊಂಡು ಬಂದರು. ಆ ಸ್ತ್ರೀಯು ವ್ಯಭಿಚಾರ ಮಾಡುವಾಗಲೇ ಸಿಕ್ಕಿಕೊಂಡಿದ್ದಳು. ಅವರು ಆ ಸ್ತ್ರೀಯನ್ನು ಜನರ ಮುಂದೆ ಬಲವಂತವಾಗಿ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಸ್ತ್ರೀಯನ್ನು ನಿಯಮ ಬೋಧಕರು ಮತ್ತು ಫರಿಸಾಯರು ಹಿಡಿದು ಯೇಸುವಿನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಶಾಸ್ತರಾ ಶಿಕ್ವುತಲ್ಯಾನಿ ಅನಿ ಫಾರಿಜೆವಾನಿ ವೆಭಿಚಾರ್ ಕರ್‍ತಾನಾ ಗಾವುನ್ ಪಡಲ್ಲ್ಯಾ ಎಕ್ ಬಾಯ್ಕೊಮನ್ಸಿಕ್ ಘೆವ್ನ್ ಯೆಲ್ಯಾನಿ, ಅನಿ ಸಗ್ಳ್ಯಾಂಚ್ಯಾ ಇದ್ರಾಕ್ ತಿಕಾ ಇಬೆ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:3
10 ತಿಳಿವುಗಳ ಹೋಲಿಕೆ  

ಮರುದಿನ ಮುಂಜಾನೆ ಅವರು ಮತ್ತೆ ಮಹಾದೇವಾಲಯಕ್ಕೆ ಬಂದರು. ಜನರು ಸುತ್ತಲೂ ಬಂದು ನೆರೆಯಲು ಯೇಸು ಕುಳಿತುಕೊಂಡು ಬೋಧಿಸತೊಡಗಿದರು.


ಅವಳನ್ನು ಎಲ್ಲರ ಮುಂದೆ ನಿಲ್ಲಿಸಿ, “ಬೋಧಕರೇ, ಈ ಹೆಂಗಸು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಳು.


ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು.


ಪ್ರೇಷಿತರನ್ನು ಸಭೆಯ ಮುಂದೆ ನಿಲ್ಲಿಸಿ, “ಇದೆಲ್ಲವನ್ನು ನೀವು ಯಾರ ಹೆಸರಿನಲ್ಲಿ ಮತ್ತು ಯಾವ ಅಧಿಕಾರದಿಂದ ಮಾಡಿದಿರಿ?” ಎಂದು ಪ್ರಶ್ನಿಸಿದರು.


ಅವನನ್ನು ಮೋಶೆ, ಆರೋನ್ ಹಾಗೂ ಸರ್ವಸಮುದಾಯದ ಬಳಿಗೆ ಹಿಡಿದುಕೊಂಡು ಬಂದರು.


ವ್ಯಭಿಚಾರಮಾಡುವಂಥ, ರಕ್ತ ಹರಿಸುವಂಥ ಹೆಂಗಸರಿಗೆ ವಿಧಿಸತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ನನ್ನ ಕೋಪೋದ್ರೇಕವನ್ನೂ ರೋಷಾವೇಶವನ್ನೂ ರಕ್ತದಂತೆ ನಿನ್ನ ಮೇಲೆ ಸುರಿಸುವೆನು.


ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಹರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ.”


ಯೆಹೂದ್ಯರ ಎಲ್ಲ ಮುಖ್ಯ ಯಾಜಕರನ್ನೂ ಧರ್ಮಶಾಸ್ತ್ರಿಗಳನ್ನೂ ಅವನು ಸಭೆಸೇರಿಸಿದನು. “ಕ್ರಿಸ್ತ ಹುಟ್ಟಬೇಕಾದುದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು.


ಆಗ ಆ ಜನರು ಅವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಹೋದರು.


ಪತಿ ಬದುಕಿರುವಾಗಲೇ ಸತಿಯು ಇನ್ನೊಬ್ಬನೊಡನೆ ಸಂಬಂಧ ಬೆಳೆಸಿದರೆ ಆಕೆ ವ್ಯಭಿಚಾರಿಣಿ ಎನಿಸಿಕೊಳ್ಳುತ್ತಾಳೆ. ಪತಿಯು ಸತ್ತುಹೋದರೆ ಆಕೆ ವಿವಾಹಬಂಧನದಿಂದ ಮುಕ್ತಳು. ಅಂಥವಳು ಇನ್ನೊಬ್ಬನನ್ನು ಮದುವೆ ಆದರೂ ವ್ಯಭಿಚಾರಿಣಿ ಎನಿಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು