Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:34 - ಕನ್ನಡ ಸತ್ಯವೇದವು C.L. Bible (BSI)

34 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ ಕೇಳಿ: ಪಾಪವನ್ನು ಮಾಡುವವನು ಪಾಪಕ್ಕೆ ದಾಸನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅದಕ್ಕೆ ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಪಾಪಮಾಡುವ ಪ್ರತಿಯೊಬ್ಬನೂ ಪಾಪಕ್ಕೆ ಗುಲಾಮನಾಗಿದ್ದಾನೆ. ಪಾಪವು ಅವನ ಯಜಮಾನನಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅದಕ್ಕೆ ಯೇಸು ಉತ್ತರವಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರು ಪಾಪಕ್ಕೆ ಗುಲಾಮರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಜೆಜುನ್ ತೆಂಕಾ, “ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ; ಜೊ ಕೊನ್ ಪಾಪ್ ಕರ್‍ತಾ, ತೊ ಪಾಪಾಚೊ ಗುಲಾಮ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:34
16 ತಿಳಿವುಗಳ ಹೋಲಿಕೆ  

ಯಾರ ಕೈಕೆಳಗೆ ಗುಲಾಮರಾಗಿರಲು ನಿಮ್ಮನ್ನೇ ಒಪ್ಪಿಸಿಕೊಳ್ಳುತ್ತೀರೋ ಅವರಿಗೆ ನೀವು ಶರಣಾಗುತ್ತೀರಿ. ನೀವು ಪಾಪಕ್ಕೆ ಗುಲಾಮರಾದರೆ ಮರಣವೇ ನಿಮಗೆ ಗತಿ; ದೇವರಿಗೆ ಶರಣಾದರೆ ಸತ್ಸಂಬಂಧವೇ ಅದರ ಸತ್ಪರಿಣಾಮ.


ತಾವೇ ದುರಭ್ಯಾಸಗಳಿಗೆ ಗುಲಾಮರಾಗಿದ್ದರೂ ತಾವು ವಶಪಡಿಸಿಕೊಂಡವರಿಗೆ ಸ್ವಾತಂತ್ರ್ಯವನ್ನು ತರುವ ಮಾತುಕೊಡುತ್ತಾರೆ. ಒಬ್ಬನು ಯಾವುದಕ್ಕೆ ಸೋಲುತ್ತಾನೋ ಅದಕ್ಕೆ ಅವನು ಗುಲಾಮನಾಗುತ್ತಾನೆ.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ.


ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ದೇವರೇ; ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ.


ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಅದೇನೆಂದರೆ, ಸೃಷ್ಟಿಯು ಸಹ ವಿನಾಶವಿಧಿಯಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮಾಯುತ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ, ಎಂಬುದೇ.


ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.


ನೀನು ದ್ವೇಷಾಸೂಯೆಯಿಂದ ತುಂಬಿರುವೆ; ಪಾಪಕ್ಕೆ ದಾಸನಾಗಿರುವೆ,” ಎಂದನು.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು