Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:36 - ಕನ್ನಡ ಸತ್ಯವೇದವು C.L. Bible (BSI)

36 ಪುತ್ರನು ನಿಮಗೆ ಸ್ವಾತಂತ್ರ್ಯ ನೀಡಿದರೆ, ನೀವು ನಿಜವಾಗಿಯೂ ಸ್ವತಂತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆದದರಿಂದ ಮಗನು ನಿಮ್ಮನ್ನು ಬಿಡುಗಡೆಮಾಡಿದರೆ ನಿಜವಾಗಿ ನಿಮಗೆ ಬಿಡುಗಡೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದ್ದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನೀವು ನಿಜವಾಗಿಯೂ ಬಿಡುಗಡೆಯಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆದ್ದರಿಂದ ದೇವಪುತ್ರನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿ ನೀವು ಬಿಡುಗಡೆಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಲೆಕಾನ್ ತುಮ್ಕಾ ಸ್ವತಂತ್ರ್ ಕರ್ಲ್ಯಾನ್ ತರ್, ತುಮಿ ಖರೆಚ್! ಸ್ವತಂತ್ರ್ ಹೊತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:36
12 ತಿಳಿವುಗಳ ಹೋಲಿಕೆ  

ಈ ವಾಕ್ಯದಲ್ಲಿ, ‘ಪ್ರಭು’ ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ.


ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ನಿನ್ನ ನುಡಿಗನುಸಾರ ದೃಢಪಡಿಸು ನನ್ನ ನಡತೆಯನು I ಕೆಡುಕೊಂದೂ ಅಧೀನಪಡಿಸದಿರಲಿ ನನ್ನನು II


ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II


ಕಾಪಾಡೆನ್ನನು, ಬೇಕು ಬೇಕೆಂದು ಪಾಪಮಾಡದಂತೆ I ಕಾದಿಡು, ಅಂಥ ಪಾಪಕೆ ನಾ ದಾಸನಾಗದಂತೆ I ನಿರ್ದೋಷಿಯಾಗುವೆನು, ಆ ದ್ರೋಹಕ್ಕೊಳಗಾಗದಂತೆ II


ಪ್ರಭುವಿನಿಂದ ಕರೆಹೊಂದಿದವನು ದಾಸನಾಗಿದ್ದರೂ ಪ್ರಭುವಿನಲ್ಲಿ ಅವನು ಸ್ವತಂತ್ರನೆ. ಅದೇ ಮೇರೆಗೆ ಸ್ವತಂತ್ರನಾದವನು ಕ್ರಿಸ್ತಯೇಸುವಿನಿಂದ ಕರೆಹೊಂದಿದ್ದರೆ ಅವನು ಕ್ರಿಸ್ತಯೇಸುವಿನ ದಾಸನೇ ಆಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು