Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:37 - ಕನ್ನಡ ಸತ್ಯವೇದವು C.L. Bible (BSI)

37 ನೀವು ಅಬ್ರಹಾಮನ ವಂಶಜರೆಂದು ನಾನು ಬಲ್ಲೆ. ಆದರೆ ನನ್ನ ಮಾತು ಹಿಡಿಸದ ಕಾರಣ ನನ್ನನ್ನು ಕೊಲ್ಲಲು ಹವಣಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನೀವು ಅಬ್ರಹಾಮನ ಸಂತಾನದವರು ನಿಜ; ಆದರೂ ನನ್ನ ವಾಕ್ಯವು ನಿಮ್ಮಲ್ಲಿ ಸಾಗದೆ ಇರುವ ಕಾರಣ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನೀವು ಅಬ್ರಹಾಮನ ಮಕ್ಕಳೆಂದು ನನಗೆ ಗೊತ್ತಿದೆ. ಆದರೆ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ. ಏಕೆಂದರೆ ನನ್ನ ಉಪದೇಶವನ್ನು ಸ್ವೀಕರಿಸಿಕೊಳ್ಳಲು ನಿಮಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು. ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲಲು ಹುಡುಕುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತುಮಿ ಅಬ್ರಾಹಾಮಾಚ್ಯಾ ಘರಾನ್ಯಾಚೆ ಮನುನ್ ಮಾಕಾ ಗೊತ್ತ್ ಹಾಯ್. ಅಜುನ್ ಬಿ ತುಮಿ ಮಾಕಾ ಜಿವಾನಿ ಮಾರುಕ್ ಮನುನ್ ಬಗುಲ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತುಮಿ ಮಿಯಾ ಶಿಕ್ವಲ್ಲೆ ಮಾನುನ್ ಘೆಯ್ನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:37
22 ತಿಳಿವುಗಳ ಹೋಲಿಕೆ  

ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ಅಂತೆಯೇ ಅಬ್ರಹಾಮನ ಸಂತತಿಯಲ್ಲಿ ಹುಟ್ಟಿದ ಮಾತ್ರಕ್ಕೆ ಎಲ್ಲರೂ ಅಬ್ರಹಾಮನ ಮಕ್ಕಳಾಗುವುದಿಲ್ಲ. “ಇಸಾಕನಿಂದ ಹುಟ್ಟುವವರು ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ದೇವರು ಅಬ್ರಹಾಮನಿಗೆ ನುಡಿದರು.


ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.


“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.


ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.


ಅಂದಿನಿಂದಲೇ ಯೆಹೂದ್ಯ ಅಧಿಕಾರಿಗಳು ಯೇಸುವನ್ನು ಕೊಲ್ಲಬೇಕೆಂದು ನಿರ್ಧಾರ ಮಾಡಿಕೊಂಡರು.


ಮೋಶೆ ಕೊಟ್ಟ ಧರ್ಮಶಾಸ್ತ್ರ ನಿಮಗಿದೆಯಲ್ಲವೇ, ಆದರೂ ಅದಕ್ಕೆ ಸರಿಯಾಗಿ ನಡೆಯುವವರಾರೂ ನಿಮ್ಮಲ್ಲಿ ಇಲ್ಲ. ನನ್ನನ್ನು ಕೊಲ್ಲಬೇಕೆಂದು ನೀವು ಹವಣಿಸುವುದೇಕೆ?” ಎಂದರು.


ಆಗ ಯೆಹೂದ್ಯರು, ಅವರತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು.


ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ಅವರ ಮೇಲೆ ತಪ್ಪುಹೊರಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು. ಯೇಸುವಾದರೋ ಬಗ್ಗಿಕೊಂಡು ಬೆರಳಿನಿಂದ ಮರಳ ಮೇಲೆ ಏನನ್ನೋ ಬರೆಯುತ್ತಾ ಕುಳಿತರು. ಬಂದವರಾದರೋ ಮೇಲಿಂದ ಮೇಲೆ ಪ್ರಶ್ನೆಹಾಕುತ್ತಲೇ ಇದ್ದರು.


ಜೆರುಸಲೇಮಿನ ಕೆಲವುಮಂದಿ ಇದನ್ನು ಕೇಳಿ, “ಅವರು ಕೊಲ್ಲಬೇಕೆಂದು ಹವಣಿಸುತ್ತಾ ಇರುವುದು ಈತನನ್ನೇ ಅಲ್ಲವೆ?


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ಅದಕ್ಕೆ ಯೆಹೂದ್ಯರು, “ನಾವು ಅಬ್ರಹಾಮನ ವಂಶಜರು; ಯಾರಿಗೂ ಎಂದೂ ನಾವು ದಾಸರಾಗಿಲ್ಲ. ಅಂದಮೇಲೆ ನಾವು ಸ್ವತಂತ್ರರಾಗುತ್ತೇವೆ, ಎಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.


‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು,” ಎಂದು ಉತ್ತರಕೊಟ್ಟರು.


ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು‍ ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು