Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:46 - ಕನ್ನಡ ಸತ್ಯವೇದವು C.L. Bible (BSI)

46 ನನ್ನಲ್ಲಿ ತಪ್ಪಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಆಡುವುದಾದರೆ ನನ್ನನ್ನು ನೀವು ನಂಬುವುದಿಲ್ಲವೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನನ್ನಲ್ಲಿ ಪಾಪವಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ, ನೀವು ನನ್ನನ್ನು ಯಾಕೆ ನಂಬುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನನ್ನಲ್ಲಿ ಪಾಪವನ್ನು ತೋರಿಸಿಕೊಡುವವರು ನಿಮ್ಮೊಳಗೆ ಯಾರಿದ್ದಾರೆ? ನಾನು ಸತ್ಯವನ್ನು ಹೇಳುವವನಾಗಿರುವಲ್ಲಿ ನೀವು ನನ್ನ ಮಾತನ್ನು ನಂಬದೆ ಇರುವದು ಯಾಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ನನ್ನಲ್ಲಿ ಪಾಪವನ್ನು ತೋರಿಸಿಕೊಡುವವನು ನಿಮ್ಮಲ್ಲಿ ಯಾವನಾದರೂ ಇರುವನೇ? ನಾನು ಸತ್ಯವನ್ನು ಹೇಳಿದರೂ ನೀವೇಕೆ ನಂಬುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ನನ್ನಲ್ಲಿ ಪಾಪವಿದೆಯೆಂದು ರುಜುವಾತು ಪಡಿಸುವವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ ನೀವು ನನ್ನನ್ನು ಏಕೆ ನಂಬುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತುಮ್ಚ್ಯಾತ್ಲೊ ಕೊನ್ ತೊ ಮಾಜ್ಯಾ ಭುತ್ತುರ್ ಪಾಪ್ ದಾಕ್ವುನ್ ದಿತಲೊ? ಮಿಯಾ ಖರೆಚ್! ಸಾಂಗ್ಲೊ ತರ್ ತುಮಿ ಕಶ್ಯಾಕ್ ಮಾಜೆರ್ ವಿಶ್ವಾಸ್ ಕರಿನ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:46
12 ತಿಳಿವುಗಳ ಹೋಲಿಕೆ  

ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ಆಗ ಯೇಸು ನೆಟ್ಟಗೆ ಕುಳಿತು, “ನಿಮ್ಮಲ್ಲಿ ಪಾಪಮಾಡದವನು ಯಾವನೋ ಅಂಥವನು ಇವಳ ಮೇಲೆ ಮೊದಲನೆಯ ಕಲ್ಲು ಬೀರಲಿ,” ಎಂದು ಹೇಳಿ,


“ದೇವರಿಂದ ಬಂದಿತೆಂದು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವನು.


'ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?’ “ ಎಂದು ಕೇಳಿದರು.


ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು.


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ದೇವರ ಮಕ್ಕಳು ದೇವರ ಮಾತಿಗೆ ಕಿವಿಗೊಡುತ್ತಾರೆ. ನೀವೋ ದೇವರ ಮಕ್ಕಳಲ್ಲ, ಆದುದರಿಂದಲೇ ಕಿವಿಗೊಡುವುದಿಲ್ಲ,” ಎಂದು ನುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು