Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:47 - ಕನ್ನಡ ಸತ್ಯವೇದವು C.L. Bible (BSI)

47 ದೇವರ ಮಕ್ಕಳು ದೇವರ ಮಾತಿಗೆ ಕಿವಿಗೊಡುತ್ತಾರೆ. ನೀವೋ ದೇವರ ಮಕ್ಕಳಲ್ಲ, ಆದುದರಿಂದಲೇ ಕಿವಿಗೊಡುವುದಿಲ್ಲ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ದೇವರಿಂದ ಹುಟ್ಟಿದವನು ದೇವರ ಮಾತುಗಳನ್ನು ಕೇಳುತ್ತಾನೆ. ನೀವು ದೇವರಿಂದ ಹುಟ್ಟದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ದೇವರಿಂದ ಹುಟ್ಟಿದವನು ದೇವರು ಹೇಳುವ ಮಾತುಗಳನ್ನು ಸ್ವೀಕರಿಸಿಕೊಳ್ಳುವನು. ಆದರೆ ನೀವು ದೇವರಿಂದ ಹುಟ್ಟಿಲ್ಲದ ಕಾರಣ ಆತನ ಮಾತುಗಳನ್ನು ಸ್ವೀಕರಿಸಿಕೊಳ್ಳುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲ. ಆದ್ದರಿಂದ ನೀವು ಕಿವಿಗೊಡುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಜೆ ಕೊನ್ ದೆವಾಕ್ನಾ ಯೆತಾ ತೊ ದೆವಾಚ್ಯಾ ಗೊಸ್ಟಿಯಾ ಆಯಿಕ್ತಾ. ತುಮಿ ದೆವಾಕ್‍ ಸಮಂದ್ ಪಡಲ್ಲೆ ನ್ಹಯ್, ತಸೆಮನುನ್ ತುಮಿ ಮಾಜಿ ಗೊಸ್ಟಿಯಾ ಆಯ್ಕಿನ್ಯಾಶಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:47
17 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ನಾನು ನುಡಿಯುವುದಾದರೋ ಸತ್ಯವನ್ನೇ. ಆದುದರಿಂದಲೇ ನಿಮಗೆ ನನ್ನಲ್ಲಿ ನಂಬಿಕೆ ಇಲ್ಲ.


ನೀವು ಅಬ್ರಹಾಮನ ವಂಶಜರೆಂದು ನಾನು ಬಲ್ಲೆ. ಆದರೆ ನನ್ನ ಮಾತು ಹಿಡಿಸದ ಕಾರಣ ನನ್ನನ್ನು ಕೊಲ್ಲಲು ಹವಣಿಸುತ್ತೀರಿ.


ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.


“ ‘ಪಿತನು ಅನುಗ್ರಹಿಸಿದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು.


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.


ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.


ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು