Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:48 - ಕನ್ನಡ ಸತ್ಯವೇದವು C.L. Bible (BSI)

48 ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅದಕ್ಕೆ ಯೆಹೂದ್ಯರು - ನೀನು ಸಮಾರ್ಯನೂ ದೆವ್ವಹಿಡಿದವನೂ ಆಗಿದ್ದೀ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಯೆಹೂದ್ಯರು, “ನಾವು ನಿನ್ನನ್ನು ಸಮಾರ್ಯದವನೆಂದು ಹೇಳುತ್ತೇವೆ! ನಿನ್ನೊಳಗೆ ದೆವ್ವವು ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅದಕ್ಕೆ ಯೆಹೂದಿ ನಾಯಕರು ಯೇಸುವಿಗೆ, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವ ಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಜುದೆವಾನಿ ಜೆಜುಕ್ ಸಾಂಗಲ್ಲ್ಯಾನಿ, “ತಿಯಾ ಸಮಾರಿಯಾಚೊ ಮಾನುಸ್ ಹೊಯ್ ಕಾಯ್ ನ್ಹಯ್?” ಅನಿ ತುಕಾ ಗಿರೊ ಲಾಗ್ಲಾ ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:48
18 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿರಬೇಕು; ನಿನ್ನನ್ನು ಕೊಲ್ಲಲು ಹವಣಿಸುತ್ತಿರುವವರಾದರು ಯಾರು?” ಎಂದರು.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.


ಅದಕ್ಕೆ ಆಕೆ, “ನೀವು ಯೆಹೂದ್ಯರು, ನಾನು ಸಮಾರಿಯದವಳು. ಹೀಗಿರುವಲ್ಲಿ ನೀವು ನನ್ನಿಂದ ನೀರು ಕೇಳಬಹುದೆ?” ಎಂದಳು. (ಯೆಹೂದ್ಯರಿಗೂ ಸಮಾರಿಯದವರಿಗೂ ಹೊಕ್ಕುಬಳಕೆ ಇರಲಿಲ್ಲ).


ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ! -


ಆದರೆ ಫರಿಸಾಯರು ಇದನ್ನು ಕೇಳಿದಾಗ, “ಇವನು ದೆವ್ವಗಳನ್ನು ಬಿಡಿಸುತ್ತಿರುವುದು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದಲೇ,” ಎಂದರು.


ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”


ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.


ದೇವರು ಒಬ್ಬರೇ ಎಂದು ನೀವು ನಂಬುತ್ತೀರಿ. ಈ ನಂಬಿಕೆ ಒಳ್ಳೆಯದೇ. ಆದರೆ ದೆವ್ವಗಳೂ ನಂಬುತ್ತವೆ; ಹೆದರಿ ನಡುಗುತ್ತವೆ.


ಕ್ರಿಸ್ತಯೇಸು ತಮ್ಮ ಸ್ವಂತ ಹಿತವನ್ನು ಎಂದಿಗೂ ಬಯಸಲಿಲ್ಲ. “ದೇವರೇ, ನಿಮ್ಮನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಎರಗಿವೆ,” ಎಂದು ಲಿಖಿತವಾಗಿರುವ ವಾಕ್ಯ ಅವರಿಗೆ ಅನ್ವಯಿಸುತ್ತದೆ.


‘ಬೋಧಕರೇ, ಪ್ರಭುವೇ’ ಎಂದು ನೀವು ನನ್ನನ್ನು ಕರೆಯುತ್ತೀರಿ; ನೀವು ಹಾಗೆ ಹೇಳುವುದು ಸರಿಯೆ. ನಾನು ಬೋಧಕನೂ ಹೌದು, ಪ್ರಭುವೂ ಹೌದು.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.


“ಮಾನವರು ಮಾಡುವ ಪ್ರತಿಯೊಂದು ಪಾಪಕ್ಕೂ ಆಡುವ ದೇವದೂಷಣೆಗೂ ಕ್ಷಮೆ ಉಂಟು. ಆದರೆ ಪವಿತ್ರಾತ್ಮನ ವಿರುದ್ಧ ಆಡುವ ದೂಷಣೆಗೆ ಕ್ಷಮೆಯೇ ಇಲ್ಲ.


ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯವನ್ನು ಸೇವಿಸಲಿಲ್ಲ. ಅದಕ್ಕೆ, ‘ಇವನಿಗೆ ದೆವ್ವ ಹಿಡಿದಿದೆ’ ಎಂದರು.


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ಅದಕ್ಕೆ ಯೆಹೂದ್ಯರು, ‘ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗೆಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?’ ಎಂದು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು