Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:51 - ಕನ್ನಡ ಸತ್ಯವೇದವು C.L. Bible (BSI)

51 ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯವನ್ನು ಕೈಕೊಂಡು ನಡೆದರೆ ಅವನು ಎಂದಿಗೂ ಸಾವನ್ನು ಕಾಣುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ವಾಕ್ಯಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ ಜೊ ಕೊನ್ ಮಾಜ್ಯಾ ಶಿಕ್ವುತಲ್ಯಾಕ್ ಖಾಲ್ತಿ ಹೊವ್ನ್ ಚಲ್ತಾತ್ ತೊ ಕನ್ನಾಚ್ ಮರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:51
15 ತಿಳಿವುಗಳ ಹೋಲಿಕೆ  

“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.


ಸ್ವರ್ಗದಿಂದ ಇಳಿದುಬಂದ ರೊಟ್ಟಿಯಾದರೋ ಹಾಗಲ್ಲ, ಇದನ್ನು ತಿನ್ನುವ ಯಾರಿಗೂ ಸಾವೆಂಬುದು ಇಲ್ಲ.


ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು.


ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಆತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ.


ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II


ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


“ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು